ಪಾಲಿಟೆಕ್ನಿಕ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Education
Published on

ಕೊಳ್ಳೇಗಾಲ: ಚಿಲಕವಾಡಿ ಬೆಟ್ಟದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ 2023-24ನೇ ಸಾಲಿಗೆ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪಾಲಿಟೆಕ್ನಿಕ್ ನಲ್ಲಿ ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಕೋರ್ಸ್ ಇದ್ದು ಒಟ್ಟು 63 ಸೀಟುಗಳಲ್ಲಿ 13 ಸೀಟುಗಳು ಲಭ್ಯವಿದೆ. ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಪಿಯುಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಸಿ-20 ಪಠ್ಯಕ್ರಮ ಅನುಭವಿ ಉಪನ್ಯಾಸಕರು, ಸುಸಜ್ಜಿತ ಪ್ರಯೋಗಾಲಯ, ಗ್ರಂಥಾಲಯ, ಡಿಜಿಟಲ್ ಕಲಿಕೆಗಾಗಿ ಸ್ಮಾರ್ಟ್ ಕ್ಲಾಸ್ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ 9972014274, 9663626047 ಹಾಗೂ 9739744688 ಸಂಪರ್ಕಿಸುವಂತೆ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ಕೆ.ಜಿ. ಕಲ್ಲೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net