ದೀಕ್ಷಾಭೂಮಿ ಯಾತ್ರೆಗೆ ತೆರಳಿದ ಅನುಯಾಯಿಗಳು

10-kollegal-1,,
Published on

ಕೊಳ್ಳೇಗಾಲ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಆವರಣದಲ್ಲಿ ಮಹಾರಾಷ್ಟ್ರದ ನಾಗಪುರಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ದೀಕ್ಷಾಭೂಮಿ ಯಾತ್ರೆಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಗುರುವಾರ ಚಾಲನೆ ನೀಡಿದರು.

ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆಗೆ ತೆರಳುವ ಎಲ್ಲರಿಗೂ ಶುಭವಾಗಲಿ. ಬಾಬಾ ಸಾಹೇಬರ ತತ್ವ, ಸಿದ್ಧಾಂತವನ್ನು ಅರಿತು ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಲಿ ಎಂದು ಆಶಿಸಿದರು. ಇದಕ್ಕೂ ಮೊದಲು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. 4 ಬಸ್‌ಗಳಲ್ಲಿ ತಾಲೂಕಿನ 200 ಯಾತ್ರಾರ್ಥಿಗಳ ಪ್ರಯಾಣ ಬೆಳೆಸಿದ್ದಾರೆ. ನಗರಸಭೆ ಅಧ್ಯಕ್ಷೆ ರೇಖಾ, ಉಪಾಧ್ಯಕ್ಷ ಎ.ಪಿ.ಶಂಕರ್, ಸದಸ್ಯರು, ಸಮಾಜ ಕಲ್ಯಾಣಾಧಿಕಾರಿ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ, ಅಂಬೇಡ್ಕರ್ ಪ್ರತಿಮೆ ನಿರ್ಮಾತೃ ಓಲೆ ಮಹದೇವ, ಮಾಂಬಳ್ಳಿ ಮೋಹನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net