ತೋಟದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ

20kglphoto-4
Published on

ಕೊಳ್ಳೇಗಾಲ: ಪಟ್ಟಣದ ಬೂದಿತಿಟ್ಟು ಗ್ರಾಮದ ತೋಟದಲ್ಲಿ ಗುರುವಾರ ಚಿರತೆ ಪ್ರತ್ಯಕ್ಷವಾಗಿದ್ದು, ಈ ಭಾಗದ ರೈತರಲ್ಲಿ ಭಯ ಹುಟ್ಟುಹಾಕಿದೆ.

ಗ್ರಾಮದ ನಿವಾಸಿ ಸಂಜಯ್ ಎಂಬುವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದೆ. ಬೆಳಗ್ಗೆ 9 ಗಂಟೆ ಸಮಯದಲ್ಲಿ ಮನೆ ಹೊರಗೆ ಕಟ್ಟಿದ್ದ ಹಸು-ಕರುಗಳು ಚೀರಾಡುವುದನ್ನು ಕೇಳಿಸಿಕೊಂಡು ಗಾಬರಿಗೊಂಡು ಮನೆಯಿಂದ ಹೊರಬಂದ ಸಂಜಯ್‌ಗೆ ಚಿರತೆ ಕಾಣಿಸಿಕೊಂಡಿದೆ. ಚಿರತೆ ಜಮೀನನ ಮಧ್ಯೆದಲ್ಲಿ ಹೋಗುವುದನ್ನು ಮೊಬೈಲ್ ಫೋನ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ಬಗ್ಗೆ ಅರಣ್ಯಾಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಅರಣ್ಯಾಧಿಕಾರಿಗಳು ಚಿರತೆ ಹೆಜ್ಜೆ ಗುರುತು ಅದರ ಚಲನವಲನದ ಬಗ್ಗೆ ಪರಿಶೀಲನೆ ನಡೆಸಿದರು. ಚಿರತೆ ಸೆರೆಗೆ ಬೋನು ಅನ್ನು ಅಳವಡಿಸಿದ್ದಾರೆ. ಬುಧವಾರ ರಾತ್ರಿ ಮುಡಿಗುಂಡ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ರೈತರು ಜಮೀನಿಗೆ ಹೋಗಲು ಹಿಂಜರಿಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net