

ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿ ಗ್ರಾಮದ ಬಳಿ ಶುಕ್ರವಾರ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ. ತಾಲೂಕಿನ ಮುಳ್ಳೂರು ಗ್ರಾಮದ ರಾಜಮ್ಮ (62) ಮೃತ. ಇವರ ಪುತ್ರ ರವೀನ್ ಕುಮಾರ್‌ಗೆ ಸಣ್ಣ-ಪುಟ್ಟ ಗಾಯವಾಗಿದೆ.
ರವೀನ್ ಹಾಗೂ, ರಾಜಮ್ಮ ಗುಂಡಾಲ್ ರಸ್ತೆಯಲ್ಲಿ ಕೊಳ್ಳೇಗಾಲದ ಕಡೆಗೆ ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದರು. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿಸಲಾಗಿತ್ತು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ರಾಜಮ್ಮ ಅವರನ್ನು ವೈದ್ಯರ ಸಲಹೆಯಂತೆ ಚಾಮರಾಜನಗರ ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.