ಮರಳೇಶ್ವರ ದೇವಾಲಯದಲ್ಲಿ ಮಹಾಭಿಷೇಕ

8-kglphoto-1.,
Published on

ಕೊಳ್ಳೇಗಾಲ: ಮಹಾ ಶಿವರಾತ್ರಿ ಪ್ರಯುಕ್ತ ಪಟ್ಟಣದ ಶ್ರೀ ಮೀನಾಕ್ಷಿ ಸಮೇತ ಮರಳೇಶ್ವರ ದೇವಾಲಯದಲ್ಲಿ ಶುಕ್ರವಾರ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿತು.

ಮುಂಜಾನೇಯಿಂದಲೆ ದೇವಾಲಯದಲ್ಲಿ ಸಾಂಪ್ರಾದಾಯಿಕ ಪೂಜೆ ಆರಂಭಗೊಂಡಿತು. ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಹಾಲಿನಿಂದ ಮಹಾಭಿಷೇಕ ಸಲ್ಲಿಸಲಾಯಿತು. ಸನ್ನಿಧಿಗೆ ಬಂದ ಭಕ್ತರಿಗೆ ಅಭಿಷೇಕದ ಹಾಲನ್ನು ಪ್ರಸಾದವಾಗಿ ನೀಡಲಾಯಿತು. ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳ ಸಾವಿರಾರು ಜನರು ದೇವಾಲಯಕ್ಕೆ ಭೇಟಿ ನೀಡಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ದೇವಾಲಯ ಆವರಣದಲ್ಲಿ ಭಜನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೇವಾಲಯದ ಪ್ರಧಾನ ಅರ್ಚಕ ದೀಕ್ಷಿತ್ ಭಟ್ ನೇತೃತ್ವದಲ್ಲಿ ಪೂಜೆ ನಡೆಯಿತು.
ಪಟ್ಟಣದ ಪುರಾಣ ಪ್ರಸಿದ್ಧ ಮರಡಿ ಗುಡ್ಡದಲ್ಲಿರುವ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯ ಹಾಗೂ ಸುಬ್ರಮಣ್ಯ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಿತು. ಶ್ರೀ ಕ್ಷೇತ್ರ ಕುರುಬನಕಟ್ಟೆ ದೇವಾಲಯದಲ್ಲಿ ಸಾವಿರಾರು ಭಕ್ತರು ಪೂಜೆ ಸಲ್ಲಿಸಿದರು. ತಾಲೂಕಿ ನಾಂದ್ಯಂತವಿರುವ ಈಶ್ವರ ದೇವಾಲಗಳಲ್ಲೂ ವಿಶೇಷ ಪೂಜೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net