ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

9-kglphoto-2
Published on

ಕೊಳ್ಳೇಗಾಲ: ಫಾತಿಮಾ ಶೇಖ್ ಅವರ ಜನ್ಮದಿನದ ಪ್ರಯುಕ್ತ ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಸಂಘದ ವತಿಯಿಂದ ಪಟ್ಟಣದ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಗುರುವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಮಕ್ಕಳು, ಅಂಗವಿಕಲ ಮಕ್ಕಳು ಹಾಗೂ 11 ಉತ್ತಮ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಬಿಆರ್‌ಸಿ ಮಹದೇವಕುಮಾರ್, ಫಾತಿಮಾ ಶೇಖ್ ಅವರು ಭಾರತದ ಪ್ರಥಮ ಮುಸ್ಲಿಂ ಶಿಕ್ಷಕಿಯಾಗಿದ್ದರು. ಸಾವಿತ್ರಿಬಾಯಿ ಫುಲೆ ಹಾಗೂ ಫಾತಿಮಾ ಶೇಖ್ ದೀನದಲಿತ ಸಮುದಾಯಗಳಿಗೆ ಶಿಕ್ಷಣ ನೀಡುವ ಕೆಲಸವನ್ನು ಮಾಡಿದರು. ಮಹಿಳೆಯರ ಶಿಕ್ಷಣಕ್ಕೆ ಫಾತಿಮಾ ಶೇಖ್ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಸರ್ಕಾರಿ ಮುಸ್ಲಿಂ ನೌಕರರ ಸಂಘದ ಅಧ್ಯಕ್ಷ ಕಲೀಮ್ ಷರೀಪ್, ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಸಂಘದ ಅಧ್ಯಕ್ಷ ಶಿವರಾಜು, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಅಕ್ಬರ್, ಎಸ್ಸಿ-ಎಸ್ಟಿ ಶಿಕ್ಷಕರ ಸಂಘದ ಅಧ್ಯಕ್ಷ ಸಿದ್ದರಾಜು, ಬಿಆರ್‌ಪಿ ಹೀನಾ ಕೌಸರ್, ಸಿಆರ್‌ಪಿ ಆಯುಷಾ, ಪ್ರಾಂಶುಪಾಲೆ ಸಭಾನ ಭಾನು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net