

ಕೊಳ್ಳೇಗಾಲ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ನಾಗೇಶ್ ಅವರನ್ನು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶಿಶು ಯೋಜನಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ತೆರವಾದ ಕೊಳ್ಳೇಗಾಲ ಶಿಶು ಯೋಜನಾಧಿಕಾರಿ ಸ್ಥಾನಕ್ಕೆ ಮಂಡ್ಯ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಂಜಮ್ಮಣಿ ಅವರನ್ನು ನಿಯೋಜಿಸಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ಎಚ್. ಸರೋಜಮ್ಮ ಆದೇಶ ಹೊರಡಿಸಿದ್ದಾರೆ.