ಕಣ್ಣಿನ ಉಚಿತ ತಪಾಸಣಾ ಶಿಬಿರ

Published on

ಕೊಳ್ಳೇಗಾಲ: ಪಟ್ಟಣದ ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆ ಆವರಣದಲ್ಲಿ ಭಾನುವಾರ ಎಚ್.ಕೆ ಟ್ರಸ್ಟ್, ರೋಟರಿ ಕ್ಲಬ್, ರೋಟರಿ ಮಿಡ್-ಟೌನ್ ಹಾಗೂ ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ನೇತ್ರ ನಿರಂತರ ಕಾರ್ಯಕ್ರಮದಡಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ಶಿಬಿರಕ್ಕೆ ಚಾಲನೆ ನೀಡಿದ ವಿಶ್ವಚೇತನ ಸಂಸ್ಥೆಯ ಶಿಕ್ಷಕ ಲೋಕೇಶ್ ಮಾತನಾಡಿ, ದಿವಂಗತ ಎಚ್. ಕೃಷ್ಣಸ್ವಾಮಿ ಅವರು ಸಮಾಜ ಸೇವೆಗೆ ಹೆಚ್ಚು ಒತ್ತು ನೀಡಿದವರಾಗಿದ್ದರು. ಅವರು ತೋರಿಸಿಕೊಟ್ಟ ದಾರಿಯಲ್ಲಿ ಕೃಷ್ಣಸ್ವಾಮಿ ಅವರ ಪತ್ನಿ ಪ್ರೇಮಲತಾ ಕೃಷ್ಣಸ್ವಾಮಿ ಎಚ್.ಕೆ ಟ್ರಸ್ಟ್ ಮೂಲಕ ಶಿಕ್ಷಣ ಹಾಗೂ ಆರೋಗ್ಯ ಕಾರ್ಯಕ್ರಮಗಳನ್ನು ಆಯೋಜಿಸಿ ಬಡಜನರಿಗೆ ನೆರವಾಗುತ್ತಿದ್ದಾರೆ ಎಂದರು.

ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ಬಡವರ, ಕೃಷಿಕರ ಹಾಗೂ ಹಿಂದುಳಿದ ವರ್ಗದವರ ಮಕ್ಕಳಿಗೆ ಅತೀ ಕಡಿಮೆ ದರದಲ್ಲಿ ಶಿಕ್ಷಣ ನೀಡುತ್ತಿದ್ದಾರೆ. ಪ್ರತಿ ತಿಂಗಳ ಎರಡನೇ ಭಾನುವಾರ ನೇತ್ರ ನಿರಂತರ ಕಾರ್ಯಕ್ರಮ ನಡೆಸುವ ಮೂಲಕ ಗ್ರಾಮೀಣ ಪ್ರದೇಶ ಬಡ ಜನರಿಗೆ ಆರೋಗ್ಯ ಸೇವೆ ನೀಡುತ್ತಿದ್ದಾರೆ ಎಂದರು.
ಶಿಬಿರದಲ್ಲಿ 101 ಜನರು ತಪಾಸಣೆಗೆ ಒಳಪಟ್ಟಿದ್ದು ಅದರಲ್ಲಿ 44 ಜನರನ್ನು ಕಣ್ಣಿನ ಶಸ್ತ್ರ ಚಿಕಿತ್ಸೆಗಾಗಿ ಅರವಿಂದ ಕಣ್ಣಿನ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು. ಈ ಸಂದರ್ಭದಲ್ಲಿ ಅರವಿಂದ ಕಣ್ಣಿನ ಆಸ್ಪತ್ರೆಯ ಡಾ.ಪೂಜಾ, ಸಂಯೋಜಕ ವಿಜಯ್ ಕುಮಾರ್, ವಿಶ್ವಚೇತನ ಸಂಸ್ಥೆಯ ಸಂಯೋಜಕ ರಾಜೇಶ್, ವ್ಯವಸ್ಥಾಪಕ ರವೀಂದ್ರ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net