ಮಾಜಿ ಶಾಸಕರನ್ನು ಭೇಟಿ ಮಾಡಿದ ಸುನೀಲ್‌ಬೋಸ್

26-KGLPHOTO-3
Published on

ಕೊಳ್ಳೇಗಾಲ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸುನೀಲ್ ಬೋಸ್ ಕೊಳ್ಳೇಗಾಲಕ್ಕೆ ಮಂಗಳವಾರ ಭೇಟಿ ನೀಡಿದ್ದರು.

ಪಟ್ಟಣದ ಶ್ರೀ ಮಹದೇಶ್ವರ ಕಾಲೇಜು ರಸ್ತೆಯಲ್ಲಿರುವ ಮಾಜಿ ಶಾಸಕ ಹಾಗೂ ರಾಜ್ಯ ಉಗ್ರಾಣ ನಿಗಮ ಮಂಡಳಿ ಅಧ್ಯಕ್ಷ ಎಸ್.ಜಯಣ್ಣ ಹಾಗೂ ಹನೂರು ಕ್ಷೇತ್ರದ ಮಾಜಿ ಶಾಸಕ ಆರ್.ನರೇಂದ್ರ ಅವರ ನಿವಾಸಕ್ಕೆ ತೆರಳಿದ ಸುನೀಲ್ ಬೋಸ್ ಅವರು ಎಸ್.ಜಯಣ್ಣ ಹಾಗೂ ಆರ್.ನರೇಂದ್ರ ಅವರನ್ನು ಸನ್ಮಾನಿಸಿದರು.

ಈ ವೇಳೆ ಲೋಕಸಭಾ ಚುನಾವಣೆ ಗೆಲುವಿಗಾಗಿ ನಿಮ್ಮ ಸಹಕಾರ ಬೇಕಿದೆ. ನೀವು ಹಿರಿಯರಿದ್ದೀರಿ ನಿಮ್ಮ ಸಲಹೆ, ಮಾರ್ಗದರ್ಶನದಲ್ಲಿ ನಡೆದುಕೊಂಡು ಪ್ರಾಮಾಣಿಕವಾಗಿ ಜನರ ಸೇವೆ ಮಾಡುವುದಾಗಿ ಎಸ್.ಜಯಣ್ಣ ಹಾಗೂ ಆರ್.ನರೇಂದ್ರ ಅವರ ಬಳಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net