ಕೊಳ್ಳೇಗಾಲ: ಪಟ್ಟಣದ ಶ್ರೀ ವಾಸವಿ ವಿದ್ಯಾಕೇಂದ್ರ (ಸಿಬಿಎಸ್‌ಇ)ಕ್ಕೆ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ದೊರೆತಿದೆ.
ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ಶೇಕ್ ಫರಹ ಹುಸೇನ್ 480(ಶೇ.96) ಅಂಕ ಪಡೆದು ಕೊಳ್ಳೇಗಾಲ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ಜಾಹಿದ್ ಖಾನ್ 470(ಶೇ.94), ಬಿ.ಪೃಥ್ವಿರಾಜ್ 463 (92.6), ಎಸ್.ದಿತ್ಯಾ ಅಚ್ಚಮ್ 459 (ಶೇ.91.8) ಅಂಕ ಪಡೆದಿದ್ದಾರೆ. ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ 17 ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಎ.ಡಿ ಕುಮಾರ ಕೃಷ್ಣ, ಕಾರ್ಯದರ್ಶಿ ಪಿ.ಜಿ.ಶ್ರೀಧರ್ ಮತ್ತು ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದರು.