ನಿಂಗರಾಜು ಕುಟುಂಬಕ್ಕೆ ಪರಿಹಾರ ಕೊಡಿಸಲು ಒತ್ತಾಯ

Published on

ಕೊಳ್ಳೇಗಾಲ: ಪೊಲೀಸ್ ಜೀಪ್‌ನಿಂದ ಹಾರಿ ಮೃತಪಟ್ಟ ಆರೋಪಿ ನಿಂಗರಾಜು ಕುಟುಂಬಕ್ಕೆ ಪರಿಹಾರ ಕೊಡಿಸಲು ಈಗಾಗಲೇ ಸರ್ಕಾರವನ್ನು ಒತ್ತಾಯಿಸಲಾಗಿದೆ ಎಂದು ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಗಿರೀಶ್ ಉಪ್ಪಾರ್ ಹೇಳಿದರು.


ಈಗಾಗಲೇ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸಿದ್ದು ಮೃತ ಕುಟುಂಬಕ್ಕೆ ಪರಿಹಾರ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ ಒತ್ತಾಯಿಸಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಮೃತ ನಿಂಗರಾಜು ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ. ಪ್ರಕರಣ ಸಂಬಂಧ ಈಗಾಗಲೇ ಒಬ್ಬ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸರು ಅಮಾನತುಗೊಂಡಿದ್ದಾರೆ ಎಂದರು.
ನಗರಸಭೆ ಸದಸ್ಯ ನಟರಾಜು, ರಾಜ್ಯ ಗ್ರಾಮ ಮತ್ತು ಸಬಲೀಕರಣ ಸಮಿತಿ ಉಪಾಧ್ಯಕ್ಷ ರವಿಕುಮಾರ್, ನಾಗರಾಜು ಉಪ್ಪಾರ್, ಕೃಷ್ಣಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net