ನಾಳೆ ಗಣರಾಜ್ಯೋತ್ಸವ ಆಚರಣೆ

Republic Day 25 Jan 20
Published on

ಕೊಳ್ಳೇಗಾಲ: ಪಟ್ಟಣದ ಸರ್ಕಾರಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭವನ್ನು ಜ.26 ರಂದು ಬೆಳಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಸಮಾರಂಭದಲ್ಲಿ ಉಪವಿಭಾಗಾಧಿಕಾರಿ ಬಿ.ಆರ್.ಮಹೇಶ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕ ಎ.ಆರ್. ಕೃಷ್ಣಮೂರ್ತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹನೂರು ಶಾಸಕ ಎಂ.ಆರ್.ಮಂಜುನಾಥ್ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅಥಿತಿಗಳಾಗಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಡಾ.ಡಿ.ತಿಮ್ಮಯ್ಯ, ಮಧು ಜಿ.ಮಾದೇಗೌಡ, ಸಿ.ಎನ್.ಮಂಜೇಗೌಡ, ಆರಕ್ಷಕ ಉಪಾ ಅಧೀಕ್ಷಕ ಜಿ.ಯು. ಸೋಮೇಗೌಡ, ನಗರಸಭೆ ಪೌರಾಯುಕ್ತ ರಮೇಶ್ ಭಾಗವಹಿಸಲಿದ್ದಾರೆ. ಚಾಮರಾಜನಗರದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪಿ.ದೇವರಾಜು ಮುಖ್ಯ ಭಾಷಣ ಮಾಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net