

ವಿಜಯವಾಣಿ ಸುದ್ದಿಜಾಲ ಬೈಂದೂರು
ಪ್ರಸಕ್ತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಫೂರ್ತಿ, ಆಸಕ್ತಿ ಹಾಗೂ ಇಚ್ಛಾಶಕ್ತಿಯಿಂದ ಪರಿಶ್ರಮಪಟ್ಟು ಆಡಿದಾಗ ತಕ್ಕ ಪ್ರತಿಫಲ ಸಿಗುತ್ತದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹೇಳಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಲಿಂಗ ನಾಯ್ಕ ಧ್ವಜಾರೋಹಣ ನೆರವೇರಿಸಿದರು. ಸುರೇಂದ್ರ ಶೆಟ್ಟಿ ಕ್ರೀಡಾ ಜ್ಯೋತಿ ಬೆಳಗಿಸಿದರು. ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ್ ಪೂಜಾರಿ ಗದ್ದೆಮನೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ನಾಗರಾಜ ಭಟ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ಜಿ.ಬಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ರವಿಶಂಕರ್ ಹೆಗ್ಡೆ ಉಪಸ್ಥಿತದ್ದರು. ಸುಕೇಶ್ ಶೆಟ್ಟಿ ಹೊಸಮಠ ಸ್ವಾಗತಿಸಿದರು. ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ ಕಾರ್ಯಕ್ರಮ ನಿರೂಪಿಸಿದರು.