ಅಧ್ಯಕ್ಷೆಯಾಗಿ ಮಮತಾ ಶೆಟ್ಟಿ ಆಯ್ಕೆ : ಕೊಳ್ನಾಡು ಶಾಲೆ ಸುವರ್ಣ ಮಹೋತ್ಸವ ಸಮಿತಿ ರಚನೆ

New Project (4)
Published on

ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆ 2027ರಲ್ಲಿ ಸುವರ್ಣ ಮಹೋತ್ಸವ ಆಚರಿಸಲಿದ್ದು, ಈ ಹಿನ್ನೆಲೆಯಲ್ಲಿ ಸುವರ್ಣಮಹೋತ್ಸವ ಕಟ್ಟಡ ನಿರ್ಮಾಣ ಸಮಿತಿ ರಚನೆ ಸಭೆ ಇತ್ತೀಚೆಗೆ ಆಯೋಜನೆಗೊಂಡಿತು.

ಅಧ್ಯಕ್ಷೆಯಾಗಿ ಮಮತಾ ಪಿ.ಶೆಟ್ಟಿ ಮಂಚಿ, ಪ್ರಧಾನ ಕಾರ್ಯದರ್ಶಿಯಾಗಿ ಮ್ಯಾಕ್ಸಿಮ್ ಫರ್ನಾಂಡಿಸ್, ಕೋಶಾಧಿಕಾರಿಯಾಗಿ ಉಮಾನಾಥ ರೈ ಮೇರಾವು ಹಾಗೂ ಪ್ರಧಾನ ಸಂಚಾಲಕರಾಗಿ ರಮಾನಂದ ನೂಜಿಪ್ಪಾಡಿ, ಪದಾಧಿಕಾರಿಗಳು ಆಯ್ಕೆಯಾದರು.

ಸಮಿತಿ ಗೌರವಾಧ್ಯಕ್ಷ ಸತೀಶ್ ಕುಮಾರ್ ಆಳ್ವ ಇರಾ ಬಾಳಿಕೆ ಮಾತನಾಡಿ ಹಾಗೂ ಮಾರ್ಗದರ್ಶನ ಸಮಿತಿಯ ಪುರುಷೋತ್ತಮ ಟಿ., ಎಸ್‌ಡಿಎಂಸಿ ಅಧ್ಯಕ್ಷ ಶಿವಶಂಕರ್ ರಾವ್ ಶುಭಹಾರೈಸಿದರು. ಮುಖ್ಯ ಶಿಕ್ಷಕಿ ಸುಶೀಲಾ ವಿಟ್ಲ ಆಶಯ ನುಡಿಗಳನ್ನಾಡಿದರು.

ಪ್ರಮುಖರಾದ ಶ್ರೀರಾಮಮೂರ್ತಿ, ರಮೇಶ್ ರಾವ್ ಪತ್ತುಮುಡಿ, ಗಣೇಶ್ ಪ್ರಭು, ಸುಲೈಮಾನ್ ಜಿ.ಸುರಿಬೈಲು, ಗಿರೀಶ್ ಗೌಡ, ಹಳೇ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ರಾಮ್‌ಪ್ರಸಾದ್ ರೈ ತಿರುವಾಜೆ ಸ್ವಾಗತಿಸಿದರು. ತಾರಾನಾಥ್ ಕೈರಂಗಳ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net