ಕೇಳೂರಿನಲ್ಲಿ ಬೈಕ್​ ಡಿಕ್ಕಿಯಾಗಿ ಪಾದಚಾರಿ ಸಾವು

Crime Logo
Published on

ಸವಣೂರ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ತಾಲೂಕಿನ ಕಳಸೂರ ಗ್ರಾಮದ ಬಳಿ ಬುಧವಾರ ನಡೆದಿದೆ.
ಗ್ರಾಮದ ನಾಗಪ್ಪ ನಿಂಗಪ್ಪ ಮತ್ತೂರ (58) ಮೃತ ದುರ್ದೈವಿ.
ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಹಿಂದಿನಿಂದ ಬಂದ ಬೈಕ್​ ಸವಾರ ಡಿಕ್ಕಿ ಪಡಿಸಿದ್ದಾರೆ. ಇದರಿಂದ ಗಭೀರವಾಗಿ ಗಾಯಗೊಂಡ ನಾಗಪ್ಪನನ್ನು ಚಿಕಿತ್ಸೆಗಾಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net