ವಾಹನ ಕಳ್ಳತನ ಮಾಡುತ್ತಿದ್ದ ಕುಖ್ಯಾತ ಆರೋಪಿ ಬಂಧನ

mng--3 Dec konaje bike case
Published on

ಮಂಗಳೂರು: ವಾಹನ ಕಳವು ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿ ಆತನಿಂದ ಒಟ್ಟು 68 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.


ಉಳ್ಳಾಲ ತಾಲೂಕು ಬೆಳ್ಮ ನಿತ್ಯಾನಂದ ನಗರದ ಹುಸೈನ್ ಜಾಹೀದ್ (24) ಬಂಧಿತ ಆರೋಪಿ. 1 ಹೋಂಡಾ ಡೀಯೋ ಸ್ಕೂಟರ್, 1 ಹೋಂಡಾ ಆಕ್ಟಿವಾ, 1 ಸುಜೂಕಿ ಆಕ್ಸೇಸ್ ಸ್ಕೂಟರ್ ವಶಕ್ಕೆ ಪಡೆಯಲಾಗಿದೆ.


ಅ.22ರಂದು ಅಂಬ್ಲಮೊಗರು ಗ್ರಾಮದ ತಿಲಕನಗರ ಎಂಬಲ್ಲಿ ಐಸಮ್ಮ ಎಂಬವರ ಹೋಂಡಾ ಡೀಯೋ ಕಳವು ಮಾಡಲಾಗಿತ್ತು. ನ.16ರಂದು ದೇರಳಕಟ್ಟೆಯ ಗ್ರೀನ್ ಗ್ರೌಂಡ್ ಬಳಿ ಗುಲಾಮ್ ಹುಸೇನ್ ಎಂಬವರು ಹೋಂಡಾ ಆಕ್ಟಿವಾ ವಾಹನ ಕಳವಾಗಿತ್ತು.


ಈ ಎರಡೂ ಪ್ರಕರಣಗಳ ಆರೋಪಿಯನ್ನು ಕೊಣಾಜೆ ಪೊಲೀಸರು ಹುಡುಕುತ್ತಿದ್ದಾಗ ಡಿ.1 ರಂದು ಕೊಣಾಜೆ ಠಾಣಾ ಪಿ.ಎಸ್.ಐ ಅಶೋಕ ಅವರು ಸಿಬ್ಬಂದಿಗಳ ಜೊತೆ ಈ ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿ ಹುಸೇನ್ ಜಾಹೀದ್‌ನನ್ನು ಬಂಧಿಸಿ, ಕಳವು ಮಾಡಿದ ಸ್ಕೂಟರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.


ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಮಾರ್ಗದರ್ಶನದಂತೆ,ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ದಿನೇಶ್‌ಕುಮಾರ್ ನಿರ್ದೇಶನದಂತೆ, ಮಂಗಳೂರು ದಕ್ಷಿಣ ವಿಭಾಗದ ಎ.ಸಿ.ಪಿ. ಧನ್ಯ ಎನ್ ನಾಯಕ್ ಅವರ ನೇತೃತ್ವದಲ್ಲಿ ಈ ಆರೋಪಿಗಳ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಕೊಣಾಜೆ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ಬಾಲಕೃಷ್ಣ, ಪೊಲೀಸ್ ಉಪ ನಿರೀಕ್ಷಕರುಗಳಾದ ನಾಗರಾಜ್ ಎಸ್, ಪುನೀತ್ ಗಾಂವ್‌ಕರ್, ಅಶೋಕ್, ವಿನೋದ್, ಸಿಬ್ಬಂದಿಗಳಾದ ಸಂತೋಷ್ ಕೆ.ಸಿ, ಸುರೇಶ್ ತಳವಾರ್ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net