

ಗಂಡಸಿ : ಕೊಂಡೇನಾಳು ಪಿಎಸಿಸಿ ಬ್ಯಾಂಕ್‌ಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮೋಹನ್ ಕುಮಾರ್ ( ಸ್ವಾಮಿ)ಮತ್ತು ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಗೀತಾ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಚುನಾವಣೆಯಲ್ಲಿ ಮೋಹನ್ ಕುಮಾರ್ ಮತ್ತು ಗೀತಾ ತಲಾ 7 ಮತಗಳನ್ನು ಪಡೆದು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಪಡೆದರು. ಅಧ್ಯಕ್ಷ ಮೋಹನ್ ಕುಮಾರ್‌ಗೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಶಾಲು ಹೊದಿಸಿ ಸನ್ಮಾನಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಶಾಲ್ ಕುಮಾರ್, ತಾ.ಪಂ. ಮಾಜಿ ಸದಸ್ಯ ಪೂರ್ಣಚಂದ್ರ, ಮುಖಂಡರಾದ ನಾಗರಹಳ್ಳಿ ಕೃಷ್ಣೇಗೌಡ, ಕೊಂಡೇನಾಳು ರಾಜು, ಕರಿಮಾರನಹಳ್ಳಿ ನಟರಾಜ್ ಹಾಜರಿದ್ದರು. ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಜಯಘೋಷ ಕೂಗಿ ಸಂಭ್ರಮಿಸಿದರು.