ಮಕ್ಕಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ

dj khalli bag less day
Published on

ಕೊಂಡ್ಲಹಳ್ಳಿ: ವಿದ್ಯಾರ್ಥಿಗಳು ಪಠ್ಯದ ಜತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಭವಿಷ್ಯವನ್ನು ರೂಪಿಸಿಕೊಳ್ಳಬಹುದಾಗಿದೆ ಎಂದು ಮುಖ್ಯ ಶಿಕ್ಷಕ ಸಿ.ಚಂದ್ರಶೇಖರ್ ಹೇಳಿದರು.

ಗ್ರಾಮದ ಶತಮಾನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬ್ಯಾಗ್ ರಹಿತ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಕ್ಕಳು ವಿದ್ಯಾಭ್ಯಾಸದೊಂದಿಗೆ ಎಲ್ಲ ರೀತಿಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು.

ಸರ್ಕಾರ ತಂದಿರುವ ಈ ದಿನ ನಿಜಕ್ಕೂ ಮಕ್ಕಳ ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸುವಲ್ಲಿ ನೆರವಾಗಲಿದೆ ಎಂದರು.

ನಿರಂತರ ಓದಿನಿಂದ ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದನ್ನು ತಪ್ಪಿಸುವ ಉದ್ದೇಶದಿಂದ ಆಯೋಜಿಸಿರುವ ಈ ಕಾರ್ಯಕ್ರಮದಿಂದ ವಿದ್ಯಾರ್ಥಿಗಳು ಹೆಚ್ಚಿನ ವಿಷಯಗಳನ್ನು ತಿಳಿದುಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಒಂದರಿಂದ 8ನೇ ತರಗತಿಗಳ ವಿದ್ಯಾರ್ಥಿಗಳನ್ನು ಗುಂಪುಗಳನ್ನಾಗಿಸಿ ಸಾಮಾನ್ಯ ವಿಷಯದ ಕುರಿತು ಅರಿವು ಮೂಡಿಸಲಾಯಿತು.

ಸಹ ಶಿಕ್ಷಕರಾದ ಎ.ಟಿ.ತಿಪ್ಪೇಸ್ವಾಮಿ, ವನಿತಾ, ರೇಖಾ, ಒ.ನಟರಾಜ್, ತಿಪ್ಪೇಸ್ವಾಮಿ, ಸುಮಾ, ಹೇಮಾವತಿ, ಜ್ಯೋತಿ, ಶಿಲ್ಪಾ, ಸಂದೀಪ್, ಲಿಖಿತ, ಮೇಘ, ಆಶಾರಾಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net