ಆರೋಗ್ಯವಂತರಿಗೆ ಬೇಕಿಲ್ಲ ಮಾಸ್ಕ್

K HALLI JAGRATHE.M.14
Published on

ಕೊಂಡ್ಲಹಳ್ಳಿ: ಕರೊನಾ ಸೋಂಕು ಹರಡದಂತೆ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ.ಚಿದಾನಂದಪ್ಪ ಹೇಳಿದರು.

ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಮಾತನಾಡಿ, ರೋಗ ನಿರೋಧಕ ಶಕ್ತಿವುಳ್ಳವರು, ಮನೆಗಳಲ್ಲಿರುವ ಆರೋಗ್ಯವಂತರು ಮಾಸ್ಕ್ ಹಾಕುವ ಅಗತ್ಯವಿಲ್ಲ. ಆದರೆ, ಹೆಚ್ಚು ಜನ ಸೇರುವ ಉತ್ಸವ, ಸಮಾರಂಭಗಳಲ್ಲಿ ಮಾಸ್ಕ್ ಧರಿಸಬಹುದು ಎಂದರು.

ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ 15 ದಿನಗಳ ಕಾಲ ವಾಹನ ಸಂಚರಿಸಲಿದೆ ಎಂದು ತಿಳಿಸಿದರು.

ವೈದ್ಯಾಧಿಕಾರಿ ಡಾ.ಬಿ.ಶಿವಕುಮಾರ್, ಫಾರ್ಮಸಿಸ್ಟ್ ವೆಂಕಟೇಶ್, ಮಹೇಶ್, ಶ್ಯಾಮಲಾ, ಸೌಮ್ಯಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net