ಕೊಂಡ್ಲಹಳ್ಳೀಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ

K HALLI SSLC JU 9
Published on

ಕೊಂಡ್ಲಹಳ್ಳಿ: ಜೂ.25ಕ್ಕೆ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇಲ್ಲಿನ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಸಿದ್ಧತೆ ನಡೆದಿದೆ.

ಕೊಂಡ್ಲಹಳ್ಳಿ, ಬಿ.ಜಿ.ಕೆರೆ, ಕೋನಸಾಗರ, ಹುಡೇವು ಗ್ರಾಮಗಳ ಶಾಲೆಗಳ 366 ವಿದ್ಯಾರ್ಥಿಗಳು ಇದ್ದಾರೆ. ಈ ಬಾರಿ 17 ಕೊಠಡಿಗಳನ್ನು ವ್ಯವಸ್ಥೆ ಮಾಡಲಾಗಿದೆ. ಪ್ರತಿ ಕೋಣೆಯಲ್ಲಿ 20 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಮೂರಡಿ ಅಂತರದಲ್ಲಿ ಡೆಸ್ಕ್ ಹಾಕಲಾಗಿದೆ.

ಶಾಲೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ್ದು, ಎಲ್ಲ ಕೊಠಡಿಗಳನ್ನು ಸ್ಯಾನಿಟೈಸಿಂಗ್ ಮಾಡಲಾಗುತ್ತಿದೆ. ಪರೀಕ್ಷಾ ಕೇಂದ್ರದಲ್ಲಿ 11 ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದೆ ಎಂದು ಮುಖ್ಯಶಿಕ್ಷಕ ಸಿಎಂಎಸ್ ತಿಪ್ಪೇಸ್ವಾಮಿ ತಿಳಿಸಿದರು.

ವಿಜ್ಞಾನ ಶಿಕ್ಷಕ ಶಂಕ್ರಪ್ಪ, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಹುಲಿಕುಂಟೆಪ್ಪ, ಶಿಕ್ಷಕರಾದ ಸಿ.ಚಂದ್ರಶೇಖರ್, ಎ.ಟಿ.ತಿಪ್ಪೇಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net