ಮಂಡಳಿ ವ್ಯಾಪ್ತಿಯ ದೇವಾಲಯಗಳ ಪ್ರವೇಶ ನಿಷೇಧ

KSM NEWS 17-1
Published on

ಕೂಡಲಸಂಗಮ: ಕರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಭಕ್ತರ, ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ಕೂಡಲಸಂಗಮ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ದೇವಾಲಯಗಳ ಪ್ರವೇಶವನ್ನು ತಾತ್ಕಾಲಿಕವಾಗಿ ಮಂಗಳವಾರ ಮಧ್ಯಾಹ್ನ 1 ಗಂಟೆಯಿಂದ ನಿಷೇಧಿಸಲಾಗಿದೆ.

ಕೂಡಲಸಂಗಮದ ಸಂಗಮೇಶ್ವರ ದೇವಾಲಯ, ದಾಸೋಹ ಭವನ, ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ಬಸವೇಶ್ವರ ದೇವಸ್ಥಾನ, ದಾಸೋಹ ಭವನ, ಬಸವ ಸ್ಮಾರಕ, ಯಾತ್ರಿ ನಿವಾಸ, ಸಾರ್ವಜನಿಕ ಗ್ರಂಥಾಲಯ, ಇಂಗಳೇಶ್ವರದ ಸ್ಮಾರಕ, ಬೀಳಗಿ ತಾಲೂಕಿನ ಚಿಕ್ಕ ಸಂಗಮದ ಸಂಗಮೇಶ್ವರ ದೇವಸ್ಥಾನ, ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಗಂಗಾಂಬಿಕಾ ಐಕ್ಯ ಮಂಟಪ, ಮುದ್ದೇಬಿಹಾಳ ತಾಲೂಕಿನ ತಂಗಡಗಿಯ ನೀಲಾಂಬಿಕಾ ಐಕ್ಯ ಮಂಟಪದ ಪ್ರವೇಶ ನಿರ್ಬಂಧಿಸಿದ್ದು, ಭಕ್ತರು ಸಹಕರಿಸಬೇಕು ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿ ಆಯುಕ್ತೆ ರಾಜಶ್ರೀ ಅಗಸರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net