

ಕೊಪ್ಪಳ: ಆಹಾರದಲ್ಲಿ ಪೌಷ್ಟಿಕಾಂಶದ ಮೌಲ್ಯಗಳು ಇಲ್ಲದಿರುವುದರಿಂದ ರಕ್ತ ಹೀನತೆ ಉಂಟಾಗುತ್ತದೆ. ಕಾರಣ ಸತ್ವಭರಿತ ಹಾಗೂ ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಅಂಗನವಾಡಿ ಮೇಲ್ವಿಚಾರಕಿ ರೆಹಮತಬೀ ತಿಳಿಸಿದರು.
ತಾಲೂಕಿನ ಅಳವಂಡಿ ಗ್ರಾಮದ ಡಿ.ದೇವರಾಜ ಅರಸ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಪೋಷಣ್ ಮಾಸಾಚರಣೆಯಲ್ಲಿ ಮಾತನಾಡಿದರು.
ಬಾಣಂತಿ, ಗರ್ಭಿಣಿಯರು ಹಾಗೂ ಮಕ್ಕಳು ಹಸಿ ತರಕಾರಿ, ಮೊಳಕೆಯೊಡೆದ ಕಾಳುಗಳನ್ನು ಹೆಚ್ಚಾಗಿ ಸೇವಿಸಬೇಕು. ರಕ್ತಹಿನತೆಯಿಂದ ಬಳಲುತ್ತಿರುವವರು ಅನೇಕ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಾರೆ. ಕಾರಣ ಆಗಾಗ ರಕ್ತಹಿನತೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.
ಗ್ರಾಮ ಪಂಚಾಯತ ಅಧ್ಯಕ್ಷೆ ಶಂಕ್ರಮ್ಮ ಜೋಗಿನ, ಅಂಗನವಾಡಿ ಮೇಲ್ವಿಚಾರಕಿ ರೆಹಮತಬೀ, ನಿಲಯ ಮೇಲ್ವಿಚಾರಕಿ ಮೀನಾಕ್ಷಿ, ಆರೋಗ್ಯ ಸಹಾಯಕ ನಾಗರಾಜ, ಅಂಗನವಾಡಿ ಕಾರ್ಯಕರ್ತೆಯರಾದ ಮರಿಬಸಮ್ಮ, ಲಕ್ಷ್ಮಿ,ಹನುಮಕ್ಕ, ಅಕ್ಕಮ್ಮ, ಲಲಿತಾ, ನಾಗರತ್ನ, ಪುಫಿ್ಪಾ, ವಿಜಯಲಕ್ಷ್ಮಿ, ಲಲಿತಾ ಹಾಗೂ ಇತರರು ಇದ್ದರು.