ಬಂಜಾರ ಸಮುದಾಯದಲ್ಲಿ ಏಕತೆ ಮೂಡಿಸಿದ ಸಂತ- ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಅನಿಸಿಕೆ

Koppal Seevalal Jayanti
ಕೊಪ್ಪಳದಲ್ಲಿ ಜಿಲ್ಲಾಡಳಿತದಿಂದ ಸೋಮವಾರ ಸಂತ ಸೇವಾಲಾಲ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
Published on

ಕೊಪ್ಪಳ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂತ ಸೇವಾಲಾಲ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸಂತ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮುಲಕ ಗೌರವ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಮಾತನಾಡಿ, ಅಧ್ಯಾತ್ಮದ ಮೂಲಕ ಬುಡಕಟ್ಟಿನ ಉಪದೇಶಗಳನ್ನು ನೀಡಿದ ಸೇವಾಲಾಲರು ಜನರಲ್ಲಿ ಧೈರ್ಯ, ಸಾಹಸ, ಆತ್ಮಸ್ಥೈರ್ಯ ಮತ್ತು ಆತ್ಮಾಭಿಮಾನವನ್ನು ಮೂಡಿಸಿದರು. ಸೇವಾಲಾಲರ ಬೋಧನೆ ಮತ್ತು ಚಿಂತನೆಗಳು ಬಂಜಾರ ಜನಾಂಗದಲ್ಲಿ ಇಂದು ಏಕತೆಯನ್ನುಂಟು ಮಾಡಲು ಸಾಧ್ಯವಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಉಪ ವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net