ಹಾಸ್ಟೆಲ್​ಗೆ ಮೂಲ ಸೌಕರ್ಯ ಕಲ್ಪಿಸಿ

koppal bcm hostel student protest
Published on

ಕೊಪ್ಪಳ: ನಗರದ ಗವಿಶ್ರೀ ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್​ನಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಎಬಿವಿಪಿ ನೇತೃತ್ವದಲ್ಲಿ ದಿಢೀರ್​ ಪ್ರತಿಭಟನೆ ನಡೆಸಿದರು.

ಹಾಸ್ಟೆಲ್​ನಲ್ಲಿ 140ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ಸ್ನಾನ, ಶೌಚಗೃಹಗಳ ಸಂಖ್ಯೆ ಕಡಿಮೆ ಇದೆ. ಕಿಟ್​ ವಿತರಿಸಿಲ್ಲ. ಮೊಬೈಲ್​ ಕಳ್ಳತನ ನಡೆಯುತ್ತಿದೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಿಲ್ಲ. ಈ ಬಗ್ಗೆ ವಾರ್ಡನ್​ಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸುತ್ತಿಲ್ಲ. ಸಮಸ್ಯೆಗಳ ಬಗ್ಗೆ ಮೇಲಧಿಕಾರಿಗಳಿಗೆ ತಿಳಿಸುತ್ತಿಲ್ಲ. ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆಂದು ಆರೋಪಿಸಿದರು.

ವಿಷಯ ತಿಳಿದು ಸ್ಥಳಕ್ಕೆ ಬಂದ ತಾಲೂಕು ಅಧಿಕಾರಿಗಳು ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು. ನಗರಠಾಣೆ ಪಿಐ ಜಯಪ್ರಕಾಶ ಆದಷ್ಟು ಶ್ರೀ ಸಮಸ್ಯೆ ನಿವಾರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಅಧಿಕಾರಿಗಳಿಗೆ ತಿಳಿಸಿದರು. 15 ದಿನದಲ್ಲಿ ಬೇಡಿಕೆ ಈಡೇರಿಸಲಾಗುವುದು. ಮೂಲ ಸೌಕರ್ಯ ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ಪ್ರತಿಭಟನಕಾರರಾದ ಹಮ್ಮಿಗೇಶ ಎಸ್​.ಪಿ., ಗುರುಬಸವ ಗಡಿಹಳ್ಳಿ, ಪಂಪಾಪತಿ, ಕೃಷ್ಣ, ಸಂತೋಷ, ಅರುಣ, ರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net