ಜಿಲ್ಲಾ ತಬೇತಿ ಸಂಸ್ಥೆಯ ಪ್ರಶಿಕ್ಷಣಾರ್ಥಿಗಳಿಂದ ರಕ್ತದಾನ

Koppal blood donation training center
Published on

ಕೊಪ್ಪಳ: ಜಿಲ್ಲಾ ತರಬೇತಿ ಸಂಸ್ಥೆಯ ಪ್ರಶಿಕ್ಷಣಾರ್ಥಿಗಳ ರಕ್ತದಾನ ಶಿಬಿರವು ಆ.29ರಂದು ನಗರದ ತಹಸೀಲ್ದಾರ ಕಚೇರಿಯಲ್ಲಿರುವ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು.

ಜಿಲ್ಲಾ ತರಬೇತಿ ಸಂಸ್ಥೆಯಿಂದ ಪ್ರಪ್ರಥಮ ಬಾರಿಗೆ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ 16 ಜನ ಪ್ರಶಿಕ್ಷಣಾರ್ಥಿಗಳು ರಕ್ತದಾನ ಮಾಡಿದ್ದು, ಈ ಕಾರ್ಯಕ್ಕೆ ಜಿಲ್ಲಾಧಿಕಾರಿ ನಲಿನ್​ ಅತುಲ್​ ಹಾಗೂ ಇತರ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರಕ್ತದಾನ ಶಿಬಿರಕ್ಕೆ ಗ್ರೇಡ್​-2 ತಹಸೀಲ್ದಾರ್​ ಗವಿಸಿದ್ದಪ್ಪ ಮಣ್ಣೂರು ಚಾಲನೆ ನೀಡಿದರು. ರಕ್ತದಾನಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಬೋಧಕ ಶ್ರೀಧರ್​, ಶಿರಸ್ತೇದಾರ ಮಹಾವೀರ ಸೇರಿ ಪ್ರಶಿಕ್ಷಣಾರ್ಥಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net