

ಕೊಪ್ಪಳ: ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ತಾಯಿ ಎದೆ ಹಾಲು ಮಹತ್ವದ ಪಾತ್ರ ವಹಿಸುತ್ತದೆ. ಶಿಶು ಜನಿಸಿದ ದಿನದಿಂದ 6 ತಿಂಗಳವರೆಗೆ ಸ್ತನ್ಯಪಾನ ಮಾತ್ರ ಮಾಡಿಸಿ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ರಾಮಾಂಜನೇಯ ಹೇಳಿದರು.
ನಗರದ 3ನೇ ವಾರ್ಡ್ನ ನಮ್ಮ ಕ್ಲಿನಿಕ್ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯಪಾನ ಸಪ್ತಾಹದಲ್ಲಿ ಮಾತನಾಡಿದರು.
ನ್ಯೂಮೋನಿಯಾ, ಅತಿಸಾರಭೇದಿ, ಅಪೌಷ್ಟಿಕತೆ ಇತ್ಯಾದಿ ತೊಂದರೆಗಳಿಂದ ಮಗು ರಕ್ಷೀಸಲು ಹುಟ್ಟಿದ ಅರ್ಧ ಗಂಟೆಯೊಳಗೆ ತಾಯಿ ಎದೆಹಾಲು ಉಣಿಸಬೇಕು. ಹೆರಿಗೆಯಾದ ಮೂರು ದಿನದಲ್ಲಿ ಬರುವ ಹಾಲಿನಲ್ಲಿ ಕೋಲಾಸ್ಟ್ರಂ ಎಂಬ ರೋಗನಿರೋಧಕ ಶಕ್ತಿ ಹೆಚ್ಚಿರುತ್ತದೆ. ಮಗುವಿಗೆ ಎದೆಹಾಲು ಕುಡಿಸುವುದರಿಂದ ತಾಯಿಗೆ ಸ್ತನ ಕ್ಯಾನ್ಸರ್ ಬರುವುದಿಲ್ಲ. ಇದು ಮಗುವಿಗೆ ಸರಳವಾಗಿ ಜೀರ್ಣವಾಗುತ್ತದೆ. ಮಗುವಿನ ಬುದ್ಧಿಮಟ್ಟ ಹೆಚ್ಚಾಗುತ್ತದೆ. ನಿತ್ಯ 8&10 ಬಾರಿ ಎದೆ ಹಾಲುಣಿಸಿ. ತಾಯಂದಿರು ಪೌಷ್ಟಿಕ ಆಹಾರ ಸೇವಿಸಿದಲ್ಲಿ ಎದೆಹಾಲು ಉತ್ಪಾದನೆ ಹೆಚ್ಚುತ್ತದೆ ಎಂದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಮಾತನಾಡಿ, ಸಮೀೆಯಲ್ಲಿ ತಾಯಂದಿರು ಮಕ್ಕಳಿಗೆ ಎದೆಹಾಲುಣಿಸುವ ಪ್ರಮಾಣ ಕಡಿಮೆ ಇದೆ. ಪ್ರತಿ ವಷ್ ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ಸ್ತನ್ಯಪಾನ ಸಪ್ತಾಹ ಆಚರಿಸಲಾಗುತ್ತಿದೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಮನೆ-&ಮನೆಗೆ ಭೇಟಿ ನೀಡಿ ಮಾಹಿತಿ ನೀಡಲಿದ್ದಾರೆಂದು ತಿಳಿಸಿದರು.
ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಮಹೇಶ ಉಮುಚಗಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಮಾತನಾಡಿದರು. ಗವಿಸಿದ್ದೇಶ್ವರ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಸ್ತನ್ಯಪಾನ ಕುರಿತು ಕಿರುನಾಟಕ ಮೂಲಕ ಜಾಗೃತಿ ಮೂಡಿಸಿದರು.
ಡಾ.ನಿವೇದಿತಾ, ಶಿಕ್ಷಕಿ ಲಕ್ಷಿ$್ಮಬಾಯಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಲ್.ವಿ.ಸಜ್ಜನ್ ಹಾಗೂ ಇತರ ಅಧಿಕಾರಿಗಳು ಇದ್ದರು.