

ಕೊಪ್ಪಳ: ವಿಜಯಪುರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಟನೆ ಬಲಪಡಿಸುವ ಜವಾಬ್ದಾರಿ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ್ಗೆ ವಹಿಸಿ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆದೇಶಿಸಿದ್ದಾರೆ.
ರಾಜ್ಯದಲ್ಲಿ ಪಕ್ಷ ಸಂಟಿಸುವ ನಿಟ್ಟಿನಲ್ಲಿ ವಿಧಾನಸಭಾ ಕ್ಷೇತ್ರವಾರು ಸದಸ್ಯತ್ವ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ ತಿಂಗಳಲ್ಲಿ ಅಭಿಯಾನ ಪೂರ್ಣಗೊಳಿಸಬೇಕಿದೆ. ಜಿಲ್ಲಾ, ತಾಲೂಕು, ಬೂತ್ ಸಮಿತಿ ಹಾಗೂ ವಿವಿಧ ಘಟಕಗಳನ್ನು ರಚಿಸಿ ಸ್ಥಳಿಯ ಮಟ್ಟದಲ್ಲಿ ಪಕ್ಷ ರಚನಾತ್ಮಕವಾಗಿ ಬಲ ಪಡಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಿ.ವಿ.ಚಂದ್ರಶೇಖರ್ ಅವರಿಗೆ ವಿಜಯಪುರ ಜಿಲ್ಲಾ ಉಸ್ತುವಾರಿಯಾಗಿ ನೇಮಿಸಿ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಪಕ್ಷ ತಮ್ಮ ಮೇಲೆ ಭರವಸೆ ಇಟ್ಟು ಜವಾಬ್ದಾರಿವಹಿಸಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವಿಜಯಪುರದಲ್ಲಿ ಜೆಡಿಎಸ್ ಬಲಪಡಿಸಲು ಹಗಲಿರುಳು ಶ್ರಮಿಸುವೆ. ಕ್ರಿಯಾ ಯೋಜನೆ ಸಿದ್ಧಪಡಿಸಿಕೊಂಡಿದ್ದು ಕಾರ್ಯಕ್ರಪ್ರವೃತ್ತರಾಗುವುದಾಗಿ ಚಂದ್ರಶೇಖರ್ ತಿಳಿಸಿದ್ದಾರೆ.