ಕೊಪ್ಪಳ: ಬಾಲ್ಯವಿವಾಹಕ್ಕೆ ತಯಾರಿ ನಡೆದ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಬಾಲಕಿಯರನ್ನು ರಸಿದ ಮಕ್ಕಳ ರಕ್ಷಣಾ ಟಕ ಪಾಲಕರಿಗೆ ತಿಳಿವಳಿಕೆ ನೀಡಿ ಮದುವೆ ತಡೆಯುವಲ್ಲಿ ಯಶಸ್ವಿಯಾಗಿದೆ.
ಯಲಬುರ್ಗಾ ತಾಲೂಕಿನ ಕೋನಸಾಗರ, ಮುರುಡಿ ಮತ್ತು ನೆಲಜೇರಿ ಗ್ರಾಮಗಳಲ್ಲಿ ಬಾಲಕಿಯರಿಗೆ ಮದುವೆ ಮಾಡಲು ಸಿದ್ಧತೆ ನಡೆಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಒಂದೇ ದಿನ ಮೂರು ಗ್ರಾಮಗಳಿಗೆ ತೆರಳಿದ್ದಾರೆ. ವಿವಾಹಕ್ಕೆ ಒಳಗಾಗುತ್ತಿದ್ದ ಬಾಲಕಿಯರನ್ನು ರಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ. ಮಕ್ಕಳ ಸಹಾಯವಾಣಿ 1098ಗೆ ಕರೆ ಬಂದ ಹಿನ್ನೆಲೆಯಲ್ಲಿ ಆ.14ರಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಲಬುರ್ಗಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಅಂಗನವಾಡಿ ಮೇಲ್ವಿಚಾರಕಿಯರು, ಗ್ರಾಪಂ ಪಿಡಿಒಗಳು, ಶಾಲಾ ಮುಖ್ಯ ಶಿಕ್ಷಕರು, 1098 ತಂಡ ಕಾರ್ಯಾಚರಣೆ ನಡೆಸಿದೆ. ಗ್ರಾಮದಲ್ಲಿ ವಿಚಾರಿಸಿದಾಗ ಮುಂದಿನ ವರ್ಷ ಮದುವೆ ಮಾಡಲು ಸಿದ್ಧತೆ ನಡೆಸಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ.
ಬಾಲಕಿಯರ ಪಾಲಕ, ಪೋಷಕರಿಗೆ ಬಾಲ್ಯವಿವಾಹದ ನಿಷೇಧ ಕಾಯ್ದೆ ಹಾಗೂ ದುಷ್ಪರಿಣಾಗಳ ಅರಿವು ಮೂಡಿಸಲಾಗಿದೆ. ಜತೆಗೆ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಬಾಲಕಿಯರನ್ನು ರಸಿ ಮುಂದಿನ ಆರೈಕೆಗಾಗಿ ಜಿಲ್ಲಾ ಮಕ್ಕಳ ಸಮಿತಿಗೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾತಿ ತಿಳಿಸಿದ್ದಾರೆ.