ಒಂದು ವಾರ ಲಾಕ್‌ಡೌನ್ ಮುಂದುವರಿಸಬೇಕು; ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯ

15052021 Koppal BC Patil Visit Covid Care Hospital
Published on

ಕೊಪ್ಪಳ: ಬೆಂಗಳೂರಿನಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಇಳಕೆಯಾಗಿದೆ. ಆದರೆ, ಇತರ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುತ್ತಿರುವುದರಿಂದ ಮೇ 24ರ ಬಳಿಕ ಇನ್ನೊಂದು ವಾರ ಲಾಕ್‌ಡೌನ್ ಮುಂದುವರೆಸುವ ಅಗತ್ಯ ಇದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟರು.

ಲಾಕ್‌ಡೌನ್ ಮುಂದುವರಿಕೆ ಬಗ್ಗೆ ನಾನು ಮುಖ್ಯಮಂತ್ರಿಯೊಂದಿಗೆ ಚರ್ಚಿಸುವೆ. ಇನ್ನೂ ಒಂದು ವಾರ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೆ ಮನವಿ ಮಾಡುವೆ. ಜಿಲ್ಲೆಯಲ್ಲಿ ಲಾಕ್‌ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಎಸ್ಪಿಗೆ ಸೂಚಿಸುವೆ ಎಂದು ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ತಿಳಿಸಿದರು.

ಉಪ ಚುನಾವಣೆಯಿಂದ ಸೋಂಕಿನ ಪ್ರಮಾಣ ಹೆಚ್ಚಾಗಿದೆ ಎಂಬ ಮಾತುಗಳಲ್ಲಿ ಹುರುಳಿಲ್ಲ. ಸೋಂಕು ಹೇಗೆ ಹರಡುತ್ತದೆ ಎಂದು ಕಂಡುಹಿಡಿಯುವುದು ಕಷ್ಟವಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಆಧರಿಸಿ ಆಕ್ಸಿಜನ್ ಪ್ರಮಾಣ ಹೆಚ್ಚಿಸುವ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net