ಗೋ ಹತ್ಯೆ ನಿಷೇಧ ಕಾಯ್ದೆ ಜಾಗೃತಿ ಮೂಡಿಸಿ ; ಅಧಿಕಾರಿಗಳಿಗೆ ಸಚಿವ ಪ್ರಭು ಚವ್ಹಾಣ್ ಸೂಚನೆ

01092021 Koppal Minister prabhu chuhan meeting
Published on

ಪಶುಪಾಲನಾ ಇಲಾಖೆ ಪ್ರಗತಿ ಪರಿಶೀಲನೆ

ಕೊಪ್ಪಳ: ಗೋ ಹತ್ಯೆ ನಿಷೇಧ ಕಾಯ್ದೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಿ, ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಎಂದು ಅಧಿಕಾರಿಗಳಿಗೆ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಗೋವುಗಳನ್ನು ರಕ್ಷಣೆ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕಾಗಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಲಾಗಿದೆ. ಮೂಕ ಪ್ರಾಣಿಗಳು ಕಸಾಯಿಖಾನೆಗೆ ಹೋಗಬಾರದು. ಹೀಗಾಗಿ ಅಧಿಕಾರಿಗಳು ಕಾಯ್ದೆ ಬಗ್ಗೆ ಸಂಪೂರ್ಣ ಅರಿತು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net