ಕೊಪ್ಪಳ: ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಸೆ.29, 30ರಂದು ನಡೆಯಲಿವೆ ಎಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿಠ್ಠಲ ಜಾಬಗೌಡರ ತಿಳಿಸಿದ್ದಾರೆ.
ಕೊಪ್ಪಳ, ಕಲಬುರಗಿ, ಬಳ್ಳಾರಿ, ವಿಜಯನಗರ, ರಾಯಚೂರು, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕ್ರೀಡಾಕೂಟ ಇರಲಿದೆ. ಸೆ.29ರಂದು ಕಲಬುರಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಜೂಡೋ, ಟೆನ್ನಿಸ್, ವಾಲಿಬಾಲ್, ಈಜು, ಹ್ಯಾಂಡ್ ಬಾಲ್, ಟೇಬಲ್ ಟೆನ್ನಿಸ್ ಸ್ಪರ್ಧೆಗಳು, ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಫುಟ್ಬಾಲ್, ಹಾಕಿ,ನೆಟ್ ಬಾಲ್ ಸ್ಪರ್ಧೆಗಳು, ವಿಜಯನಗರ ಜಿಲ್ಲಾ ಕ್ರೀಡಾಂಗಣದಲ್ಲಿ ವುಶು ಸ್ಪರ್ಧೆ, ರಾಯಚೂರು ಕೃಷಿ ಮಹಾವಿದ್ಯಾಲಯ ಹಾಗೂ ಸಿಂಧನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಾಸ್ಕೆಟ್ಬಾಲ್, ಥ್ರೋ ಬಾಲ್, ಕಬಡ್ಡಿ, ಬೀದರ್ ನೆಹರು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಮ್ನಾಸ್ಟಿಕ್ ಬಾಕ್ಸಿಂಗ್, ಬ್ಯಾಡ್ಮಿಂಟನ್, ಯಾದಗಿರಿ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಕುಸ್ತಿ, ವೇಟ್ ಲಿಪ್ಟಿಂಗ್ ಸ್ಪರ್ಧೆಗಳು ನಡೆಯಲಿವೆ.
ಮಾಹಿತಿಗಾಗಿ ಕಲಬುರಗಿ& 9844029235 & 8884774416, ಕೊಪ್ಪಳ &7676343554, 9448633146, 6360146300, 7409272350 ಬಳ್ಳಾರಿ-9036335986 & 9886688858, ವಿಜಯನಗರ 9449126141, ರಾಯಚೂರು 6362238100 & 966364277, ಬೀದರ್- 8884694472 & 6361488733, ಯಾದಗಿರಿ-9108197572ಗೆ ಸಂಪರ್ಕಿಸುವಂತೆ ತಿಳಿಸಿದ್ದಾರೆ.