

ಕೊಪ್ಪಳ: ಇದೇ ಆ.15ರಂದು 78ನೇ ಸ್ವಾತಂತ್ರ$್ಯ ದಿನಾಚರಣೆ ಅಚ್ಚುಕಟ್ಟಾಗಿ ಆಚರಿಸಬೇಕಿದೆ. ಕಾರ್ಯಕ್ರಮ ಯಶಸ್ವಿಗೆ ವಿವಿಧ ಸಮಿತಿ ರಚಿಸಿದ್ದು ಎಲ್ಲ ಅಧಿಕಾರಿಗಳು ನಿಮ್ಮ ಜವಾಬ್ದಾರಿ ಸರಿಯಾಗಿ ನಿಭಾಯಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಹಮ್ಮಿಕೊಳ್ಳುವ ಕುರಿತು ಶುಕ್ರವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಅಂದು ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ನಿಯಮ ಉಲ್ಲಂಘಿಸಿದೆ, ಶಿಷ್ಠಾಚಾರದಂತೆ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿ ಸಹ ಅಂದೇ ಇದ್ದು, ಆಚರಣೆಗೆ ಕ್ರಮ ಕೈಗೊಳ್ಳಿ. ಪ್ರಮುಖ ರಸ್ತೆಗಳು, ಕ್ರೀಡಾಂಗಣ ಸ್ವಚ್ಛಗೊಳಿಸಿ. ಕುಡಿವ ನೀರು ವ್ಯವಸ್ಥೆ ಮಾಡಿ. ಹೋರಾಟಗಾರರಿಗೆ ಸನ್ಮಾನ ಏರ್ಪಡಿಸಿ. ತಹಸೀಲ್ದಾರ್ಗಳು ಅವರ ಮನೆಗೆ ತೆರಳಿ ಸನ್ಮಾನ ಮಾಡಿ. ಅಧಿಕಾರಿಗಳು ಕುಟುಂಬದೊಂದಿಗೆ ಧ್ವಜಾರೋಹಣಕ್ಕೆ ಕಡ್ಡಾಯವಾಗಿ ಹಾಜರಾಗಿ ಎಂದರು.
ಪಥ ಸಂಚಲನಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳಿ. ಮಕ್ಕಳಿಗೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸಿ. ಆರೋಗ್ಯ ತುರ್ತು ಪರಿಸ್ಥಿತಿ ನಿರ್ವಹಣಗೆ ವ್ಯವಸ್ಥೆ ಇರಲಿ. ಮಕ್ಕಳಿಗೆ ಲು ಉಪಾಹಾರ ನೀಡಿ. ಪ್ಲಾಸ್ಟಿಕ್ ಧ್ವಜ ನಿಷೇಧಿಸಿದ್ದು, ಅಂಗಡಿಗಳಲ್ಲಿ ಮಾರಾಟವಾಗದಂತೆ ನೋಡಿಕೊಳ್ಳಿ. ತಾಲೂಕು ಮಟ್ಟದಲ್ಲಿ ಧ್ವಜ ಸಂಹಿತೆ ಪಾಲಿಸಿ. ಸಾಂಸತಿಕ ಕಾರ್ಯಕ್ರಮಗಳಲ್ಲಿ ದೇಸಿ ನೃತ್ಯಕ್ಕೆ ಆದ್ಯತೆ ಇರಲಿ. ಸಾಧಕರಿಗೆ ಸನ್ಮಾನ ಮಾಡುವ ಬಗ್ಗೆ ಮೊದಲೇ ಮಾಹಿತಿ ಪಡೆಯಿರಿ. ಮೊದಲೇ ಪೂರ್ವ ತಯಾರಿ ಮಾಡಿಕೊಳ್ಳಿ. ಕೊನೇ ಳಿಗೆಯಲ್ಲಿ ಯಾವುದೇ ಹೊಸ ಅಂಶ ಸೇರಿಸಬೇಡಿ ಎಂದು ಸೂಚಿಸಿದರು.
ಎಡಿಸಿ ಸಿದ್ರಾಮೇಶ್ವರ, ಸಹಾಯಕ ಆಯುಕ್ತ ಕ್ಯಾ.ಮಹೇಶ ಮಾಲಗಿತ್ತಿ, ಜಿಲ್ಲಾ ತರಬೇತಿ ಕೇಂದ್ರ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಆಯುಷ್ ಅಧಿಕಾರಿ ಡಾ.ಪಿ.ಬಿ ಹಿರೇಗೌಡರ್, ನಗರಸಭೆ ಆಯುಕ್ತ ಗಣಪತಿ ಪಾಟೀಲ್, ತಹಸೀಲ್ದಾರ್ ವಿಠ್ಠಲ ಚೌಗಲಾ ಇತರರಿದ್ದರು.