

ಕೊಪ್ಪಳ: ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಸೆ.25ರಿಂದ ಅಕ್ಟೋಬರ್ 4ವರೆಗೆ ಜಿಲ್ಲಾಡಳಿತ ಭವನದಲ್ಲಿ ತಾತ್ಕಾಲಿಕ ಖಾದಿ ಮಾರಾಟ ಮಳಿಗೆ ಆರಂಭಿಸಿದ್ದು, ಬುಧವಾರ ಡಿಸಿ ನಲಿನ್ ಅತುಲ್ ಉದ್ಘಾಟಿಸಿದರು.
ಜನರಿಗೆ ಖಾದಿ ಬಟ್ಟೆಗ ಖರೀದಿಸಲು ಅನುಕೂಲ ಕಲ್ಪಿಸಿಕೊಡುವ ದೃಷ್ಟಿಯಿಂದ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಿಂದ ಖಾದಿ ಉತ್ಪನ್ನಗಳ ಮಾರಾಟಕ್ಕಾಗಿ ಜಿಲ್ಲಾಡಳಿತ ಭವನದಲ್ಲಿ ತಾತ್ಕಾಲಿಕ ಮಳಿಗೆ ಆರಂಭಿಸಲಾಗಿದೆ. ಖಾದಿ, ರೇಷ್ಮೆ ಬಟ್ಟೆಗಳು, ರೆಡಿಮೇಡ್ ಬಟ್ಟೆ, ಜಮಖಾನ, ಟಾವೆಲ್ ಸೇರಿ ಗ್ರಾಮೋದ್ಯೋಗ ಉತ್ಪನ್ನಗಳಾದ ಅಗರಬತ್ತಿ, ಸಾಬೂನು, ಜೇನುತುಪ್ಪ ದೊರೆಯಲಿದೆ ಎಂದು ಜಿಲ್ಲಾ ಗ್ರಾಮೋದ್ಯೋಗ ಅಧಿಕಾರಿ ಕೆ.ವೀರೇಶ ಹೇಳಿದರು. ಕರ್ನಾಟಕ ಸವೋರ್ದಯ ಸೇವಾ ಸಮಿತಿ ಕಾರ್ಯದರ್ಶಿ ವಿದ್ಯಾ ಪಾಟೀಲ, ತಾಂತ್ರಿಕ ಮೇಲ್ವಿಚಾರಕ ವಿಶ್ವನಾಥ ವೈ., ಖಾದಿ ಕಾರ್ಯಕರ್ತ ಬಸವರಾಜ ಇತರರಿದ್ದರು.