ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಸ್ಮರಣೆ

10052021 Koppal DC Office Hemareddimallamma jayanti
Published on

ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸರಳವಾಗಿ ಜಯಂತಿ ಆಚರಣೆ

ಕೊಪ್ಪಳ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.

ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಹೇಮರಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಹಾಗೂ ಜಿಲ್ಲಾಧಿಕಾರಿ ಕಚೇರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net