ಡಿ.ದೇವರಾಜ ಅರಸು ಜನ್ಮದಿನ ಆಚರಣೆ, ಭಾವಚಿತ್ರಕ್ಕೆ ಪುಷ್ಪಾರ್ಚನೆ

20082020 Koppal DC office Devaraj urs birthday Celbrate
Published on

ಕೊಪ್ಪಳ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಜಿ ಸಿಎಂ ಡಿ.ದೇವರಾಜ ಅರಸು ಅವರ 105ನೇ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಯಿತು.

ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಜಯಂತಿ ಆಚರಿಸಲಾಯಿತು. ದೇವರಾಜ ಅರಸು ಅವರ ಭಾವಚಿತ್ರಕ್ಕೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸಿದ್ರಾಮೇಶ್ವರ ಪುಷ್ಪ ಅರ್ಪಿಸಿ ಗೌರವ ನಮನ ಸಲ್ಲಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಈರಪ್ಪ ಆಶಾಪುರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಲಕ್ಷ್ಮಣ ಬಬಲಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net