ಜಿಲ್ಲೆಯಲ್ಲಿ ಅಬ್ಬರಿಸಿದ ವರುಣ; ಭಾರಿ ಮಳೆಗೆ ತುಂಬಿದ ಹಳ್ಳಗಳು

Muddaballi Ditch Full
ಕೊಪ್ಪಳ ತಾಲೂಕಿನ ಮುದ್ದಾಬಳ್ಳಿ ಹಳ್ಳ ತುಂಬಿ ಹರಿಯುತ್ತಿದೆ.
Published on

ಕೊಪ್ಪಳ: ಜಿಲ್ಲಾದ್ಯಂತ ಬುಧವಾರ ಸುರಿದ ಭಾರಿ ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ನಗರದ ಕೆಲವು ಬಡಾವಣೆಗಳಲ್ಲಿ ಮನೆಗಳಿಗೆ ನೀರು ಹರಿದಿದೆ.

ಭೋವಿ ಓಣಿ, ಕಾತರಕಿ ರಸ್ತೆ ಪ್ರದೇಶ ಸೇರಿ ಇತರೆಡೆ ಮನೆಗಳಿಗೆ ಮಳೆ ನೀರು ಹರಿದು ಹಾನಿ ಸಂಭವಿಸಿದೆ. ನಗರಸಭೆ ಅಧ್ಯಕ್ಷೆ ಲತಾ ಚಿನ್ನೂರು ಭೇಟಿ ನೀಡಿ ನಿವಾಸಿಗಳ ಸಮಸ್ಯೆ ಆಲಿಸಿದರು. ರಾತ್ರಿಯಿಡೀ ಮನೆಯಿಂದ ನೀರು ಹೊರಹಾಕುವುದೇ ಕೆಲಸವಾಗಿದೆ ಎಂದು ನಿವಾಸಿಗಳು ಅಳಲು ತೋಡಿಕೊಂಡರು. ಸಮಸ್ಯೆ ಸರಿಪಡಿಸಲಾಗುವುದು ಎಂದು ಅಧ್ಯಕ್ಷೆ ಲತಾ ಭರವಸೆ ನೀಡಿದರು.

ಗ್ರಾಮೀಣ ಪ್ರದೇಶದ ಮುದ್ದಾಬಳ್ಳಿ, ಹಲಗೇರಿ, ಸಿಂಧೋಗಿ ಸೇರಿ ವಿವಿಧೆಡೆ ಉತ್ತಮ ಮಳೆಯಾಗಿದೆ. ಹೆಸರು ಕಾಳು, ಮೆಕ್ಕೆಜೋಳ, ಸೂರ್ಯಕಾಂತಿ ಬಿತ್ತನೆ ಮಾಡಿರುವ ರೈತರು ಮಳೆಯಿಂದಾಗಿ ಸಂತಸಗೊಂಡಿದ್ದಾರೆ. ಭೂಮಿ ಹದಗೊಳಿಸಿದವರು ಬಿತ್ತನೆ ಕಾರ್ಯ ಶುರು ಮಾಡಿದ್ದಾರೆ. ಹೀಗಾಗಿ ಗುರುವಾರ ಬಿತ್ತನೆ ಬೀಜ ಮತ್ತು ಗೊಬ್ಬರದ ಅಂಗಡಿಗಳ ಮುಂದೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net