ಜ. 15 ರಿಂದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

Published on

ಕೊಪ್ಪಳ: ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-ದ ಅಂಗವಾಗಿ ಜ.15ರಿಂದ 29ರವರೆಗೆ ನಗರ ಮತ್ತು ಗ್ರಾಮೀಣ ಸಂಜೀವಿನಿ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ.

ಸ್ವಯಂ ಉದ್ಯೋಗದಲ್ಲಿ ಯಶಸ್ಸು ಕಂಡ ಸ್ವಯಂ ಉದ್ಯೋಗಿಗಳಿಂದ ತಯಾರಿಸಲ್ಪಟ್ಟ ಆಹಾರ, ಗೃಹಲಂಕಾರಿಕ, ಕೈಮಗ್ಗ, ಸೀರೆ ಮತ್ತು ಜವಳಿ, ಬಾಳೆ ನಾರಿನ ಉತ್ಪನ್ನಗಳು, ಚನ್ನಪಟ್ಟಣದ ಗೊಂಬೆಗಳು, ಕಿನ್ನಾಳ ಗೂಂಬೆಗಳು, ಬಿದಿರಿನ ಉತ್ಪನ್ನಗಳು, ಗೃಹಬಳಕೆ ವಸ್ತುಗಳಿಗೆ ಸಂಬಂಧಿಸಿದ 100 ಮಳಿಗೆಗಳನ್ನು ತೆರೆಯಲಾಗಿರುತ್ತದೆ.

ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಿಂದ ಹಾಗೂ ರಾಯಚೂರು, ಬಳ್ಳಾರಿ, ಗದಗ, ವಿಜಯಪುರ, ಹಾವೇರಿ, ದಾವಣಗೇರೆ, ರಾಮನಗರ, ದಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ಚಿತ್ರದುರ್ಗ, ಬೆಳಗಾವಿ, ವಿಜಯನಗರ ಜಿಲ್ಲೆಗಳ ಸ್ವ-ಸಹಾಯ ಸಂಘದ ಸದಸ್ಯರು ತಯಾರಿಸಿರುವ ಉತ್ಪನ್ನಗಳನ್ನು ಖರೀದಿಸಿ, ಪ್ರೋತ್ಸಾಹಿಸಬೇಕೆಂದು ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net