

ಕೊಪ್ಪಳ: ಜಿಲ್ಲಾ ಕೌಶಲ ಮಿಷನ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸೆ.7ರಂದು ಜಾಬ್ ಡ್ರೈವ್ ಏರ್ಪಡಿಸಲಾಗಿದೆ. ಉದ್ಯೋಗ ವಿನಿಮಯ ಕೇಂದ್ರದಲ್ಲಿ ಬೆಳಗ್ಗೆ 10.30 ರಿಂದ ಮಧ್ಯಾಹ್ನ 3.30 ಗಂಟೆವರೆಗೆ ನಡೆಯಲಿದ್ದು, ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಯಾವುದೇ ಪದವಿ, ಎಎನ್‌ಎಂ, ಜಿಎನ್‌ಎಂ ಮತ್ತು ಪ್ಯಾರಾ ಮೆಡಿಕಲ್ ವಿದ್ಯಾರ್ಹತೆ ಹೊಂದಿದ 18 ರಿಂದ 26 ವರ್ಷದ ಯುವಕ ಮತ್ತು ಯುವತಿಯರು ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗೆ ಮೊ. 9880758997, ದೂ. 08539-220859 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ್ ತಿಳಿಸಿದ್ದಾರೆ.