ಅರಸು ಜನ್ಮ ದಿನಾಚರಣೆ

20082021 Koppal Dc office
Published on

ಕೊಪ್ಪಳ: ನಗರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಡಿ.ದೇವರಾಜ ಅರಸು 106ನೇ ಜನ್ಮ ದಿನ ಆಚರಿಸಲಾಯಿತು. ಅರಸು ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಎಸ್.ವಿಕಾಸ್ ಕಿಶೋರ್ ಪುಷ್ಪ ಅರ್ಪಿಸಿ ಗೌರವ ಸಲ್ಲಿಸಿದರು. ಕರೊನಾ ಕಾರಣ ಸರಳವಾಗಿ ಕಾಯಕ್ರಮ ಆಚರಿಸಲಾಯಿತು.

ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಉಪವಿಭಾಗಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ಎಂ ದೊಡ್ಡಮನಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಎಂ.ಗಂಗಪ್ಪ, ಜಂಟಿ ಕೃಷಿ ನಿರ್ದೇಶಕ ಸದಾಶಿವ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನವೀನ್ ಸಿಂತ್ರೆ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಪಶು ಇಲಾಖೆ ಉಪನಿರ್ದೇಶಕ ಎಚ್.ನಾಗರಾಜ ಸೇರಿ ಇತರ ಇಲಾಖೆ ಅಧಿಕಾರಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net