ಕೊಪ್ಪಳ ಜಿಲ್ಲಾ ರಜತ ಉತ್ಸವ

0403-Kpl-Ravi-3
Published on

ಕೊಪ್ಪಳ: ಜಿಲ್ಲಾ ರಜತ ಮಹೋತ್ಸವ ಅಂಗವಾಗಿ ಮಾ.9ರಂದು ನಗರದ ತಾಲೂಕು ಕ್ರೀಡಾಂಗಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಂಡಿದ್ದು, ಡಿಸಿ ಎಂ.ಸುಂದರೇಶ ಬಾಬು ಮೇಳದ ಪೋಸ್ಟರ್ ಶನಿವಾರ ಬಿಡುಗಡೆ ಮಾಡಿದರು.

ಬೆಳಗ್ಗೆ 10ರಿಂದ ಸಂಜೆ 5ಗಂಟೆವರೆಗೆ ಮೇಳ ಇರಲಿದೆ. ಕೈಗಾರಿಕೆ, ಕೃಷಿ, ಫಾರ್ಮಾ, ಹೆಲ್ತ್ ಸೆಕ್ಟರ್, ಬ್ಯಾಂಕಿಂಗ್, ಫೈನಾನ್ಸಿಯಲ್ಸ್‌ಗೆ ಸಂಬಂಧಿಸಿದ 25 ರಿಂದ 40 ಕಂಪನಿಗಳು ಭಾಗವಹಿಸುತ್ತಿವೆ. ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಬಹುದು. ಗೂಗಲ್ ಫಾರ್ಮ್ vv://kqto.lôj/19ISGgE]ZzSD9 ನಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ವಿದ್ಯಾರ್ಹತೆ ಅನುಸಾರವಾಗಿ ವಿವಿಧ ರೀತಿಯ ಕೌಶಲ ಅನುಭವ ಹೊಂದಿರುವ ಅಭ್ಯರ್ಥಿಗಳು vv://mô ô hqp pjhv.fíwfíôfít.hqo/ ನಲ್ಲಿ ನೋಂದಾಯಿಸಿಕೊಂಡು ಸದುಪಯೋಗ ಪಡೆಯಬಹುದು. ಮಾಹಿತಿಗಾಗಿ ದೂ:08539-225901, ಮೊ: 9880758997, 9353515518, 7676172603, 9164966349ಗೆ ಸಂಪರ್ಕಿಸುವಂತೆ ತಿಳಿಸಿದರು.

ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಎಡಿಸಿ ಸಾವಿತ್ರಿ ಕಡಿ, ಉಪವಿಭಾಗಾಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಪ್ರಾಣೇಶ್ ಇತರರಿದ್ದರು.

ಮ್ಯಾರಥಾನ್ ಓಟ ನಾಳೆ: ಉತ್ಸವ ಅಂಗವಾಗಿ ಮಾ.6ರಂದು ಬೆಳಗ್ಗೆ 7 ಗಂಟೆಗೆ ಮ್ಯಾರಥಾನ್ ಓಟ ಹಮ್ಮಿಕೊಳ್ಳಲಾಗಿದೆ. ಡಿಸಿ ಎಂ.ಸುಂದರೇಶ ಬಾಬು ಚಾಲನೆ ನೀಡಲಿದ್ದು, ಜಿಲ್ಲಾಧಿಕಾರಿ ಕಚೇರಿಯಿಂದ ಗವಿಮಠದ ಆವರಣವರೆಗೆ ಓಟ ಇರಲಿದೆ. ಜಿಲ್ಲೆಯ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಮ್ಯಾರಥಾನ್ ಯಶಸ್ವಿಗೊಳಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಮಾ.7ರಂದು ಕೊಪ್ಪಳದ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲೆ, ಪ್ರಬಂಧ, ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಸ್ಪರ್ಧೆ ನಡೆಯಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net