ನಗದು ಬಹುಮಾನಕ್ಕಾಗಿ ಅರ್ಜಿ ಆಹ್ವಾನ

Published on

ಕೊಪ್ಪಳ: ವಿವಿಧ ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ನಗದು ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

2024-&25ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪದಕ ಪಡೆದ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ಧನ ಸಹಾಯ ಮಾಡಲಾಗುವುದು. ಆಸಕ್ತರು ಜ.24 ರೊಳಗಾಗಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಕ್ರೀಡಾಂಗಣ, ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಥ್ಲೆಟಿಕ್ಸ್​ ತರಬೇತುದಾರ ವಿಶ್ವನಾಥ ಕರ್ಲಿ ಮೊ.ಸಂ: 9620084611ಗೆ ಸಂಪರ್ಕಿಸುವಂತೆ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net