ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ನೀಡಿ

Koppal Music artist appeal
ಅಖಿಲ ಕರ್ನಾಟಕ ಲಘು ಸಂಗೀತ ಮತ್ತು ವಾದ್ಯಗೋಷ್ಠಿ ಕಲಾವಿದರ ಸಂಘದ ಜಿಲ್ಲಾ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿಗೆ ಕೊಪ್ಪಳದಲ್ಲಿ ಬುಧವಾರ ಮನವಿ ಸಲ್ಲಿಸಿದರು.
Published on

ಕೊಪ್ಪಳ: ಗಣೇಶ ಹಾಗೂ ದಸರಾ ಹಬ್ಬದಲ್ಲಿ ಕಾರ್ಯಕ್ರಮ ನಡೆಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿಗೆ ಅಖಿಲ ಕರ್ನಾಟಕ ಲಘು ಸಂಗೀತ ಮತ್ತು ವಾದ್ಯಗೋಷ್ಠಿ ಕಲಾವಿದರ ಸಂಘದ ಜಿಲ್ಲಾ ಪದಾಧಿಕಾರಿಗಳು ಬುಧವಾರ ಮನವಿ ಸಲ್ಲಿಸಿದರು.

ಕೋವಿಡ್ ಕಾರಣದಿಂದಾಗಿ ಎರಡು ವರ್ಷದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸರ್ಕಾರ ಅನುಮತಿ ನೀಡುತ್ತಿಲ್ಲ. ಇದರಿಂದಾಗಿ ವಾದ್ಯಗಾರರು ಹಾಗೂ ಸೌಂಡ್ ಸಿಸ್ಟಮ್ ಮಾಲೀಕರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಸರ್ಕಾರದಿಂದ ಯಾವುದೇ ಪರಿಹಾರವನ್ನೂ ನೀಡಿಲ್ಲ. ಸರ್ಕಾರ ನಮ್ಮ ಕಷ್ಟ ಅರಿಯುತ್ತಿಲ್ಲ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಜಿಲ್ಲೆಯಲ್ಲಿ ಕಾಯಂ ಸಹಾಯಕ ನಿರ್ದೇಶಕರಿಲ್ಲ. ಹೀಗಾಗಿ ಕಲಾವಿದರ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ, ಪರಿಹಾರ ದೊರೆಯುತ್ತಿಲ್ಲವೆಂದು ದೂರಿದರು.

ಈಗಿರುವ ಕೋವಿಡ್ ಮಾರ್ಗಸೂಚಿಯಲ್ಲಿ ಸಮಯ ನಿಗದಿಪಡಿಸಿ ನಮಗೆ ಕಾರ್ಯಕ್ರಮ ನೀಡಲು ಅವಕಾಶ ಮಾಡಿಕೊಡಬೇಕು. ಸರ್ಕಾರದಿಂದ ಸೂಕ್ತ ಪರಿಹಾರ ವಿತರಣೆ ಮಾಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net