ಕೊಪ್ಪಳ: ಜೆಸ್ಕಾಂ ಕೊಪ್ಪಳ ಉಪ-ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿದ್ಯುಚ್ಛಕ್ತಿ ಗ್ರಾಹಕರ ವಿದ್ಯುತ್‌ಶಕ್ತಿಗೆ ಸಂಬಂಧಿಸಿದ ಅಹವಾಲುಗಳು ಮತ್ತು ಕುಂದು ಕೊರತೆಗಳನ್ನು ಪರಿಹರಿಸಲು ಅ.19 ರಂದು ಬೆಳಗ್ಗೆ 11 ಗಂಟೆಗೆ ಗ್ರಾಹಕರ ಅಹವಾಲು ಸ್ವೀಕಾರ ಸಭೆಯನ್ನು ಆಯೋಜಿಸಲಾಗಿದೆ.
ಕೊಪ್ಪಳದ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಕಚೇರಿ ಸಭಾಂಗಣದಲ್ಲಿ ನಡೆಯಲಿರುವ ಸಭೆಗೆ ಸಂಬಂಧಿಸಿದ ವ್ಯಾಪ್ತಿಯ ವಿದ್ಯುತ್ ಗ್ರಾಹಕರು ಪಾಲ್ಗೊಂಡು ಸಭೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಕ ಅಭಿಯಂತರರು ತಿಳಿಸಿದ್ದಾರೆ.