ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಶ್ರಮಿಸಿ

05092021 Koppal Teacher Day
Published on

ಕೊಪ್ಪಳ: ಉಳಿದೆಲ್ಲ ವೃತ್ತಿಗಳಿಗಿಂತ ಶಿಕ್ಷಕ ವೃತ್ತಿ ಪವಿತ್ರವಾಗಿದೆ. ಜಿಲ್ಲೆಯಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಶಿಕ್ಷಕರು ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು.

ನಗರದ ಜಿಲ್ಲಾಡಳಿತಭವನದ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಭಾನುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಾಲಕರಿಗಿಂತ ಗುರುವಿನ ಪಾತ್ರ ಪ್ರಮುಖವಾಗಿದೆ. ಸರ್ಕಾರ ಶಿಕ್ಷಣ ಇಲಾಖೆಗೆ ಅನೇಕ ಸೌಲಭ್ಯ ನೀಡಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಂಡು ಮಕ್ಕಳ ಭವಿಷ್ಯ ಉತ್ತಮಗೊಳಿಸಬೇಕು. ಶಿಕ್ಷಕರ ಶ್ರಮ ದೇಶದ ಭವಿಷ್ಯ ಬರೆಯಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net