ಮನೆ ಮನೆಗೆ ಪಿಂಚಣಿ; ಕರೊನಾದಿಂದ ಮೃತಪಟ್ಟವರ ಕುಟುಂಬಕ್ಕೆ ಸೌಲಭ್ಯ

Hyati Village Pinchani Facility
ಕೊಪ್ಪಳ ತಾಲೂಕಿನ ಹ್ಯಾಟಿ ಗ್ರಾಮದ ಮಲ್ಲೇಶ ಲೇಬಗೇರಿ ಕುಟುಂಬಕ್ಕೆ ಪಿಂಚಣಿ ಸೌಲಭ್ಯದ ಆದೇಶ ಪ್ರತಿಯನ್ನು ಸಹಾಯಕ ಆಯುಕ್ತ ನಾರಾಯಣರಡ್ಡಿ ಮಂಗಳವಾರ ವಿತರಿಸಿದರು.
Published on

ಕೊಪ್ಪಳ: ಕರೊನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಜಿಲ್ಲಾಡಳಿತದಿಂದ ಮನೆ ಮನೆಗೆ ಪಿಂಚಣಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಸಹಾಯಕ ಆಯುಕ್ತ ನಾರಾಯಣರಡ್ಡಿ ಮಂಗಳವಾರ ತಾಲೂಕಿನ ಹ್ಯಾಟಿ ಗ್ರಾಮಕ್ಕೆ ತೆರಳಿ ಫಲಾನುಭವಿಗಳಿಗೆ ಆದೇಶ ಪ್ರತಿ ವಿತರಿಸಿದರು.

ಕರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳಿಗೆ ಸರ್ಕಾರ ತಲಾ ಒಂದು ಲಕ್ಷ ರೂ. ಪರಿಹಾರ ಘೋಷಿಸಿದೆ. ಕೊಪ್ಪಳ ತಾಲೂಕಿನಲ್ಲಿ 82 ಅರ್ಹ ಕುಟುಂಬಗಳಿದ್ದು, ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕರೊನಾದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ವಿಧವಾ ವೇತನ, ಅಂತ್ಯಸಂಸ್ಕಾರ ಯೋಜನೆ ಹಾಗೂ ರಾಷ್ಟ್ರೀಯ ಕುಟುಂಬ ನೆರವು ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ ಸೌಲಭ್ಯ ಕಲ್ಪಿಸುವಂತೆ ಕಂದಾಯ ಅಧಿಕಾರಿಗಳು ಸೂಚಿಸಲಾಗಿದೆ ಎಂದರು. ತಹಸೀಲ್ದಾರ್ ಅಮರೇಶ ಬಿರಾದಾರ್, ಕಂದಾಯ ನಿರೀಕ್ಷಕ ಮಂಜುನಾಥ, ಗ್ರಾಮ ಲೆಕ್ಕಾಧಿಕಾರಿ ವಿಜಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net