ಸಂವಿಧಾನ ಶಿಲ್ಪಿಗೆ ಭಕ್ತಿಯ ನಮನ, ಜಯಂತಿ ಆಚರಣೆ ಸರಳ

14042020 Koppal Ambedkar Yanati
Published on

ಕೊಪ್ಪಳ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ 129ನೇ ಜನ್ಮದಿನಾಚರಣೆಯನ್ನು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು.

ಕೋವಿಡ್-19 ವೈರಾಣು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಹೀಗಾಗಿ ಹೆಚ್ಚು ಜನ ಸೇರದೆ, ಸರಳವಾಗಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಟ ಅರ್ಪಿಸಿ, ದೀಪ ಬೆಳಗಿಸುವ ಮೂಲಕ ಆಚರಿಸಲಾಯಿತು.


ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್, ಡಿಸಿ ಪಿ.ಸುನಿಲ್ ಕುಮಾರ್, ಜಿಪಂ ಸಿಇಒ ರಘುನಂದನ್ ಮೂರ್ತಿ, ಎಡಿಸಿ ಎಂ.ಪಿ ಮಾರುತಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಲಕ್ಷ್ಮಣ ಬಬಲಿ, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಜು ಇತರರು ಪುಷ್ಪಾರ್ಪಣೆ ನೆರವೇರಿಸಿ ಭಕ್ತಿ ನಮನ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net