ಗ್ರಾಮಾಭಿವೃದ್ಧಿಯಿಂದ ದೇಶ ಅಭಿವೃದ್ಧಿ

koppal irakalagada gp health department
Published on

ಕೊಪ್ಪಳ: ನಮ್ಮದು ಹಳ್ಳಿಗಳ ದೇಶ. ಗ್ರಾಮ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಆದಂತೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ತಿಳಿಸಿದರು.

ತಾಲೂಕಿನ ಇರಕಲ್​ ಗಡಾದಲ್ಲಿ ಆರೋಗ್ಯ ಇಲಾಖೆಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಆರೋಗ್ಯ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು.

ಗ್ರಾಮಾಭಿವೃದ್ಧಿಗಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಹಲವು ಯೋಜನೆ ರೂಪಿಸಿವೆ. ಗ್ರಾಮಮಟ್ಟದ ಸ್ಥಳಿಯ ಜನಪ್ರತಿನಿಧಿಗಳಿಗೆ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿಗೆ ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ, ಮುಟ್ಟಿನ ನೈರ್ಮಲ್ಯತೆ, ಬಾಲ್ಯ ವಿವಾಹ ತಡೆಗಟ್ಟುವಿಕೆ ಹಾಗೂ ರಕ್ತಹಿನತೆ ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ತಡೆಗಟ್ಟುವ ಕುರಿತು ತಿಳಿಸಲಾಗುತ್ತಿದೆ. ತರಬೇತುದಾರರು ಸಕ್ರಿಯವಾಗಿ ಭಾಗಿಯಾಗಿ ತರಬೇತಿ ನೀಡಿ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯ ಸಿಗಬೇಕು ಎಂದರು.

ಪಿಡಿಒ ಸಿದ್ದಮ್ಮ ಮಾತನಾಡಿ, ತರಬೇತಿ ಉಪಯುಕ್ತವಾಗಿದೆ. ಗ್ರಾಮಮಟ್ಟದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು ತಿಳಿದುಕೊಂಡು ರೋಗಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸಿ. ಕ್ಷಯ ರೋಗಿಗಳ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ಕೊಡಿಸುವ ಮೂಲಕ ಕ್ಷಯ ಮುಕ್ತ ಜಿಲ್ಲೆಯಾಗಿಸಲು ಸಹಕರಿಸಲು ಮನವಿ ಮಾಡಿದರು.

ಆರೋಗ್ಯಾಧಿಕಾರಿಗಳಾದ ಶೈಲಜಾ ಪಾಟೀಲ್​, ಸಾವಿತ್ರಿ, ಸಂಜೀವಿನಿ ಮಹಿಳಾ ಒಕ್ಕೂಟ ಅಧ್ಯೆ ಶೋಭಾ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net