ವಾರ್ಡ್​ಗಳಿಗೆ ಮೂಲ ಸೌಕರ್ಯ ಕಲ್ಪಿಸಿ

koppal karave workers memorandum cmc president amxada patel
Published on

ಕೊಪ್ಪಳ: ನಗರದ ವಾರ್ಡ್​ 1ರ ಹುಲಿಕೆರೆ ರಸ್ತೆ ಪ್ರದೇಶದಲ್ಲಿನ ನಿವಾಸಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಕರವೇ ಜಿಲ್ಲಾ ಪದಾಧಿಕಾರಿಗಳು ಮಂಗಳವಾರ ನಗರಸಭೆ ಅಧ್ಯಕ್ಷ ಅಮ್ಜದ್​ ಪಟೇಲ್​ಗೆ ಮನವಿ ಸಲ್ಲಿಸಿದರು.

ಇಲ್ಲಿನ ನಿವಾಸಿಗಳಿಗೆ ಮೂಲ ಸೌಕರ್ಯಗಳಿಲ್ಲ. ಉತ್ತಮ ರಸ್ತೆ, ಚರಂಡಿ, ಕುಡಿವ ನೀರು ಕಲ್ಪಿಸಿಲ್ಲ. ಜಿಲ್ಲಾ ಕೇಂದ್ರದಲ್ಲೇ ಈ ಪರಿಸ್ಥಿತಿ ಇರುವುದು ನಾಚಿಕೆಗೇಡಿನ ಸಂಗತಿ. ಮಳೆಗಾದಲ್ಲಿ ನೀರು ಸಂಗ್ರಹವಾಗಿ ಕೆಸರು ಗದ್ದೆಯಂತಾಗುತ್ತದೆ. ಜನರು ಓಡಾಡುವುದು ಕಷ್ಟವಿದೆ. ಅಂಗನವಾಡಿ, ಶಾಲೆ ಇದ್ದು ಮಕ್ಕಳು ಹೋಗಿಬರಲು ಪರದಾಡುತ್ತಿದ್ದಾರೆ. ಈ ಬಗ್ಗೆ ದೂರು ನೀಡಿದರೂ ನಗರಸಭೆ ಸೌಲಭ್ಯ ಕಲ್ಪಿಸಿಲ್ಲವೆಂದು ದೂರಿದರು.

15 ದಿನದಲ್ಲಿ ಸೌಕಉರ್ಯ ಕಲ್ಪಿಲಸು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ, ಯುವ ಘಟಕ ಅಧ್ಯಕ್ಷ ಹನುಮಂತ ಬೆಸ್ತರ, ತಾಲೂಕಾ ಪ್ರ.ಕಾ.ನಿಂಗಪ್ಪ ಮೂಗಿನ, ಸುಲೇಮಾನ್​ ಕರಮುಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net