ಅಭಿವೃದ್ಧಿ ಪ್ರಶ್ನಿಸಿದರೆ ಜೈಲು ಭಾಗ್ಯ : ಡಾ.ಬಸವರಾಜ ಕ್ಯಾವಟರ್​ ಖಂಡನೆ

koppal kavaloor protest road basavaraj kyavatar
Published on

ಕೊಪ್ಪಳ: ತಾಲೂಕಿನ ಕವಲೂರು ಗ್ರಾಮ ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಮಾಡದಿರುವುದನ್ನು ಖಂಡಿಸಿ ಪ್ರತಿಭಟಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಜೈಲು ಭಾಗ್ಯ ಕರುಣಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಬಸವರಾಜ ಕ್ಯಾವಟರ್​ ತಿಳಿಸಿದ್ದಾರೆ.

ಗ್ರಾಮದ ಕಲ್ಪವೃಕ್ಷ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಗ್ರಾಮದಲ್ಲಿ ಬಂದ್​ ನಡೆಸಿದ್ದಾರೆ. ದಶಕದಿಂದ ಕವಲೂರು ಹಾಗೂ ಸುತ್ತಲಿನ ಗ್ರಾಮಗಳ ರಸ್ತೆಗಳು ಹಾಳಾಗಿವೆ. ಸಾರ್ವಜನಿಕರು ಪ್ರಯಾಣಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ಮಕ್ಕಳು ಶಾಲೆಗೆ ತೆರಳುವುದು ಕಷ್ಟವಾಗಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇದನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆದರೆ, ತಹಸೀಲ್ದಾರ್​ರು 14 ಜನರ ಮೇಲೆ ಪ್ರಕರಣ ದಾಖಲಿಸಿ ಜನರ ಮೇಲೆ ದರ್ಪ ಮೆರೆದಿದ್ದಾರೆ.

ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಳ್ಳಿಗಳಲ್ಲಿ ಅಭಿವೃದ್ಧಿ ವಿಷಯ ಕೇಳಿದರೆ, ಅಧಿಕಾರಿಗಳು ದರ್ಪ ಮೆರೆಯುತ್ತಿದ್ದಾರೆ. ಅಭಿವೃದ್ಧಿ ಮಾಡುವಂತೆ ಜನರು ಕೇಳುವುದು ತಪ್ಪಾ ? ಮಹಿಳೆಯರು ಹಾಗೂ ಗ್ರಾಮಸ್ಥರು ಧ್ವನಿ ಎತ್ತಿದ್ದಕ್ಕೆ ಜೈಲು ಭಾಗ್ಯ ನೀಡುವುದು ಸರಿಯಾ ? ತಕ್ಷಣ ಜನರ ಮೇಲಿನ ಕೇಸ್​ ವಾಪಸ್​ ಪಡೆಯಬೇಕು. ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ಇಲ್ಲದಿದ್ದರೆ ಅಧಿಕಾರಿಗಳ ವಿರುದ್ಧ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net