ಕಿನ್ನಾಳದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಾಳೆ

CHANDRASHEKHAR C
Published on

ಕೊಪ್ಪಳ: ಗಾಂಧಿ ಜಯಂತಿ ಅಂಗವಾಗಿ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಅ.2ರಂದು ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ನ್ಯಾಯಾಧೀಶ ಚಂದ್ರಶೇಖರ ಸಿ. ತಿಳಿಸಿದರು.

ಬೆಳಗ್ಗೆ 8ಕ್ಕೆ ಕುವೆಂಪು ಶತಮಾನೋತ್ಸವ ಮಾದರಿ ಶಾಲೆಯಲ್ಲಿ ಚಾಲನೆ ನೀಡಲಾಗುವುದು. ವಕೀಲರು, ಯುವಕ ಸಂಘಟನೆಗಳು, ಕಾಲೇಜು, ಪ್ರೌಢಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಲಿದ್ದಾರೆ. ವಿವಿಧೆಡೆ ಗಿಡ ನೆಡಲಾಗುವುದು. ಅ.3ರಂದು ಗ್ರಾಮದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ದತ್ತು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸ್ವಚ್ಛ ಗ್ರಾಮವನ್ನಾಗಿಸಲು ತ್ಯಾಜ್ಯ ಮುಕ್ತ, ಹಸರೀಕರಣ, ಶುದ್ಧ ಕುಡಿವ ನೀರು ನೈರ್ಮಲೀಕರಣ, ಅಂಗನವಾಡಿ, ಶಾಲೆ&ಕಾಲೇಜು ಹಾಗೂ ವಸತಿನಿಲಯಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು. ವ್ಯಾಜ್ಯ ಮುಕ್ತ ಗ್ರಾಮವನ್ನಾಗಿಸುವ ಗುರಿ ಹೊಂದಲಾಗಿದೆ. ಅಭಿನವ ಗವಿಶ್ರೀಗಳು ಕಾರ್ಯಕ್ರಮದ ಸಾನ್ನಿಧ್ಯವಹಿಸುವರು. ಡಿಸಿ ನಲಿನ್​ ಅತುಲ್​, ಜಿಪಂ ಸಿಇಒ ರಾಹುಲ್​ ರತ್ನಂ ಪಾಂಡೆಯ, ಎಸ್ಪಿ ಡಾ.ರಾಮ್​ ಎಲ್​. ಅರಸಿದ್ದಿ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಎ.ವಿ ಕಣವಿ, ಗ್ರಾಪಂ ಅಧ್ಯಕ್ಷೆ ಕರಿಯಮ್ಮ ಉಪ್ಪಾರ, ಉಪಾಧ್ಯಕ್ಷ ದುರುಗಪ್ಪ ಡಂಬರ ಇತರ ಗಣ್ಯರು ಭಾಗಿಯಾಗುವರೆಂದರು.

ಆಯಾ ಇಲಾಖೆಗಳಿಂದ ಸೌಲಭ್ಯ ಕಲ್ಪಿಸಲು ಅಧಿಕಾರಗಳೊಂದಿಗೆ ಸಮಾಲೋಚಿಸಲಾಗಿದೆ. ವಿವಿಧ ಹಕ್ಕುಪತ್ರ, 371(ಜೆ) ಪ್ರಮಾಣ ಪತ್ರ ವಿತರಣೆ, ಸಾರ್ವಜನಿಕ ದೂರು ಆಲಿಸಲು ಸಹಾಯವಾಣಿ ವ್ಯವಸ್ಥೆ ಮಾಡಲಾಗುವುದು. ಕೇಲವ ಎರಡು ದಿನಕ್ಕಷ್ಟೇ ಅಲ್ಲದೆ, ಬರುವ ವರ್ಷದ ಗಾಂಧಿ ಜಯಂತಿವರೆಗೂ ಸ್ವಚ್ಛತಾ ಕಾರ್ಯಕ್ರಮ ಇರಲಿದೆ ಎಂದರು.

ಹಿರಿಯ ಸಿವಿಲ್​ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಎ.ವಿ ಕಣವಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net